ಗೋಣಿಕೊಪ್ಪಲು, ಅ. ೩೧: ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಟ್ಟಂದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಿ.ಶೆಟ್ಟಿಗೇರಿ ಹಾಗೂ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿ. ಶೆಟ್ಟಿಗೇರಿ ಗ್ರಾ.ಪಂ. ಅಧ್ಯಕ್ಷÀ ಕೊಲ್ಲಿರ ಬೋಪಣ್ಣ, ಗ್ರಾಮೀಣ ಭಾಗದ ಜನತೆಯಲ್ಲಿ ರಕ್ತದಾನದ ಬಗ್ಗೆ ಹೆಚ್ಚಿನ ಅರಿವು ಹಾಗೂ ಜಾಗೃತಿ ಮೂಡಿಸುವುದು ಹಾಗೂ ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ವಿವರಿಸಿದರು. ನಗರ ಪ್ರದೇಶಕ್ಕೆ ಸೀಮಿತಗೊಂಡಿದ್ದ ಕಾರ್ಯಕ್ರಮವನ್ನು ಗ್ರಾಮೀಣ ಭಾಗಕ್ಕೆ ಪರಿಚಯಿಸಿದ್ದೇವೆ. ಮುಂದೆಯೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಭಾಗದ ಜನರು ಸಾಮಾಜಿಕ ಕಾರ್ಯಕ್ರಮದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಾರ್ಯ ಕೈಗೊಳ್ಳುವಂತೆ ಗ್ರಾಮಸ್ಥರಿಗೆ ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪೊನ್ನಂಪೇಟೆ ಹಾಗೂ ವೀರಾಜಪೇಟೆ ತಾಲೂಕು ವೈದ್ಯಾಧಿಕಾರಿ ಡಾ. ಯತಿರಾಜ್ ಮಾತನಾಡಿ, ರಕ್ತದಾನ ಮಾಡುವುದರಿಂದ ಮತ್ತೊಬ್ಬರಿಗೆ ಸಹಕಾರಿಯಾಗಲಿದೆ. ಅಪಘಾತದ ಸಂದರ್ಭ ಹಾಗೂ ಇನ್ನಿತರ ಸಂದರ್ಭದಲ್ಲಿ ಮನುಷ್ಯನ ಜೀವ ಉಳಿಸಲು ರಕ್ತ ಅತ್ಯಂತ ಪ್ರಮುಖವಾಗಿದೆ. ಇದನ್ನು ಬೇರೆ ಯಾವುದೇ ರೀತಿಯಲ್ಲಿ ತಯಾರಿಸಲು ಸಾಧ್ಯವಿಲ್ಲ.

ಮನುಷ್ಯನಿಂದ ಮಾತ್ರವೇ ರಕ್ತ ನೀಡಬಹುದಾಗಿದೆ. ಮತ್ತೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡುವುದು ಅತ್ಯಂತ ಪುಣ್ಯದ ಕೆಲಸ ಎಂದರು.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧÀಕ ಆಸ್ಪತ್ರೆ ಮಡಿಕೇರಿ, ರಕ್ತ ನಿಧಿ ಕೇಂದ್ರದ ನುರಿತ ತಜ್ಞ ವೈದ್ಯರ ತಂಡ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ದಾನಿಗಳಿಂದ ರಕ್ತವನ್ನು ಸಂಗ್ರಹಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಸನ್ನ ಸುಬ್ಬಯ್ಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಸದಸೆÀ್ಯ ಎ.ಎಸ್. ಜನಿತ, ಕುಟ್ಟಂದಿ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಶರಣ್ ಸುಬ್ಬಯ್ಯ, ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಪಿಡಿಓ ಪರಮೇಶ್, ರಕ್ಷ ಸಮಿತಿಯ ಪ್ರತಿನಿಧಿ ಸಿ.ಜೆ. ಕಾಂತಿ, ರಕ್ತನಿಧಿ ಕೇಂದ್ರದ ಡಾ. ಆಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಮುಖರಾದ ಉಮೇಶ್ ಕೇಚಮಯ್ಯ, ತೀತಿಮಾಡ ಲಾಲಾ ಭೀಮಯ್ಯ ತೀತಿಮಾಡ ಸದನ್, ಕಡೇಮಾಡ ಅನಿಲ್, ಚೇಂದಿರ ರಾಯ್, ಚೇರಂಡ ಜಗನ್, ಚಂದುರ ರೋಹಿತ್, ಚಾರಂಡ ರೋಶನ್, ಕಡೇಮಾಡ ನಂದಾ ಭೀಮಯ್ಯ ಸೇರಿದಂತೆ ಪ್ರಮುಖರು ಹಾಜರಿದ್ದರು. ಶಿಬಿರದಲ್ಲಿ ೬೦ಕ್ಕೂ ಹೆಚ್ಚು ರಕ್ತದಾನಿಗಳು ಭಾಗವಹಿಸಿದ್ದರು.