ಸಿದ್ದಾಪುರ, ಅ. ೩೧: ತಿತಿಮತಿ ಅರಣ್ಯ ವಲಯದ ವ್ಯಾಪ್ತಿಗೆ ಒಳಪಡುವ ಪಾಲಿಬೆಟ್ಟ, ಮಾಲ್ದಾರೆ ಮತ್ತು ಚೆನ್ನಯ್ಯನಕೋಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಾಡಗಬಾಣಂಗಾಲ, ಮೇಕೂರು ಹೊಸ್ಕೇರಿ ಮತ್ತು ಚೆನ್ನಯ್ಯನಕೋಟೆ ಗ್ರಾಮಗಳಲ್ಲಿ ಕಾಡಾನೆಗಳ ಹಿಂಡನ್ನು ಮರಳಿ ಕಾಡಿಗೆ ಓಡಿಸುವ ಕಾರ್ಯಾಚರಣೆ ತಾ.೧ ರಂದು ಹಮ್ಮಿಕೊಳ್ಳಲಾಗಿದೆ.
ಕಾರ್ಯಾಚರಣೆಯ ದಿನ ತೋಟದ ಕಾರ್ಮಿಕರು ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಗ್ರಾಮಸ್ಥರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ತಿತಿಮತಿ ವಲಯ ಅರಣ್ಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.