ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ಕಚ್, ಅ. ೩೧: ಭಾರತವು ತನ್ನ ಗಡಿಭಾಗದ ಒಂದು ಇಂಚು ಭೂಮಿಯನ್ನು ಕೂಡ ಬಿಟ್ಟುಕೊಡುವುದಿಲ್ಲ, ದೇಶ ರಕ್ಷಣೆ ವಿಷಯದಲ್ಲಿ ಜನರಿಗೆ ಈ ದೇಶದ ಮಿಲಿಟರಿ ಶಕ್ತಿ ಮೇಲೆ ಬಲವಾದ ನಂಬಿಕೆಯಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತಿನ ಕಚ್ ಪ್ರದೇಶದಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ನಂತರ ಸೈನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಭಾರತವು ತನ್ನ ಗಡಿಭಾಗ ದಲ್ಲಿರುವ ಒಂದಿAಚು ಭೂಮಿಯನ್ನು ಸಹ ಬಿಟ್ಟು ಕೊಡುವುದಿಲ್ಲ, ನೆಲದ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಅದಕ್ಕಾಗಿಯೇ ನಮ್ಮ ನೀತಿಗಳು ನಮ್ಮ ಸಶಸ್ತç ಪಡೆಗಳ ಸಂಕಲ್ಪದೊAದಿಗೆ ಹೊಂದಿಕೊAಡಿವೆ ಎಂದರು.

ಗ್ಯಾರAಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆ ಇಲ್ಲ-ಡಿ.ಕೆ.ಶಿ.

ಬೆಂಗಳೂರು, ಅ. ೩೧: ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ತಿರುಚಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ವಿಚಾರದಲ್ಲಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಯೋಜನೆ ನಿಲ್ಲಿಸುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದರು. ಆರ್ಥಿಕವಾಗಿ ಸದೃಢವಾಗಿರುವವರು, ಐಟಿಬಿಟಿ ಸಂಸ್ಥೆಯವರು, ಎಂಎನ್‌ಸಿ ಕಂಪೆನಿಗಳ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು ತಮಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ತಾವು ಕೆಲಸ ಮಾಡುವ ಕಂಪೆನಿಗಳಲ್ಲಿ ಸಂಚಾರಕ್ಕಾಗಿ ಪ್ರತ್ಯೇಕ ಭತ್ಯೆ ನೀಡಲಾಗುತ್ತಿದೆ. ಹೀಗಾಗಿ ನಮಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ ಎಂದರು.

ಒಮ್ಮತವಿಲ್ಲದೆ ಒಂದು ರಾಷ್ಟç, ಒಂದು ಚುನಾವಣೆ ಅಸಾಧ್ಯ-ಖರ್ಗೆ

ಬೆಂಗಳೂರು, ಅ. ೩೧: ಒಂದು ರಾಷ್ಟç, ಒಂದು ಚುನಾವಣೆ ಕುರಿತು ಪ್ರಧಾನಿ ಮೋದಿಯವರ ಹೇಳಿಕೆಯನ್ನು ತಳ್ಳಿಹಾಕಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸಂಸತ್ತಿನಲ್ಲಿ ಒಮ್ಮತವಿಲ್ಲದೆ ಒಂದು ರಾಷ್ಟç, ಒಂದು ಚುನಾವಣೆ ಅಸಾಧ್ಯ ಎಂದು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ, ಪ್ರಧಾನಿ ಮೋದಿ ಏನು ಹೇಳಿದ್ದಾರೋ ಅದನ್ನು ಮಾಡುವುದಿಲ್ಲ. ಏಕೆಂದರೆ ಸಂಸತ್ತಿಗೆ ಬಂದಾಗ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು, ಆಗ ಮಾತ್ರ ಇದು ಜಾರಿಗೊಳಿಸಲು ಸಾಧ್ಯ. ಆದರೆ ಅವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ. ಹೀಗಾಗಿ ಒಂದು ನೇಷನ್ ಒನ್ ಎಲೆಕ್ಷನ್ ಅಸಾಧ್ಯ ಎಂದರು.

ಹಗರಣದಿAದ ಗಮನ ಬೇರೆಡೆ ಸೆಳೆಯಲು ವಕ್ಫ್ ವಿವಾದ-ಹೆಚ್.ಡಿ.ಕೆ.

ಬೆಂಗಳೂರು, ಅ. ೩೧: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಿಂದ ಗಮನ ಬೇರೆಡೆ ಸೆಳೆಸಲು ಕಾಂಗ್ರೆಸ್ ಸರ್ಕಾರ ವಕ್ಫ್ ವಿವಾದ ಸೃಷ್ಟಿಸಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಗುರುವಾರ ಹೇಳಿದ್ದಾರೆ. ಚನ್ನಪಟ್ಟಣ ಉಪ ಚುನಾವಣಾ ಪ್ರಚಾರದ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ವಕ್ಫ್ ವಿವಾದಕ್ಕೆ ಸಂಬAಧಿಸಿದAತೆ ಸಿಎಂ ಸಿದ್ದರಾಮಯ್ಯ ಪ್ರತಿಪಕ್ಷಗಳನ್ನು ಟೀಕಿಸಿದ್ದರು. ವಕ್ಫ್ ಮಂಡಳಿ ವಿವಾದ ಹೇಗೆ ಬಂತು? ಅದು ಹೇಗೆ ಆರಂಭವಾಯಿತು ಎಂದು ಪ್ರಶ್ನಿಸಿದರು. ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಿಂದ ಗಮನ ಬೇರೆಡೆ ಸೆಳೆಯಲು ವಕ್ಫ್ ವಿವಾದ ಸೃಷ್ಟಿಸಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ವಕ್ಫ್ ವಿವಾದ: ಕಲ್ಲು ತೂರಾಟ, ೩೨ ಮಂದಿ ಬಂಧನ

ಹಾವೇರಿ, ಅ. ೩೧: ವಕ್ಫ್ ಮಂಡಳಿಯಿAದ ತಮ್ಮ ಭೂಮಿ ಕಳೆದುಕೊಳ್ಳುವ ಭಯದಲ್ಲಿ ರೈತರ ಗುಂಪೊAದು ಮುಸ್ಲಿಂ ಮುಖಂಡರ ನಿವಾಸಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಇದರೊಂದಿಗೆ ವಕ್ಫ್ ವಿವಾದ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಕಡಕೋಳ ಗ್ರಾಮದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಸ್ಥಳೀಯ ಮುಖಂಡ ಮೊಹಮ್ಮದ್ ರಫಿ ಅವರ ಮೇಲೆ ಗುಂಪೊAದು ಕಲ್ಲು ತೂರಾಟ ನಡೆಸಿ ಬೈಕ್ ಹಾನಿಗೊಳಿಸಿದೆ. ಪ್ರಕರಣ ದಾಖಲಿಸಲು ಯಾರೂ ಮುಂದೆ ಬರುತ್ತಿಲ್ಲ, ಘಟನೆಗೆ ಸಂಬAಧಿಸಿದAತೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ಘಟನೆಗೆ ಸಂಬAಧಿಸಿದAತೆ ೩೨ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.