ಕುಶಾಲನಗರ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕುಶಾಲನಗರ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ ನಡೆಯಿತು.
ಪಟ್ಟಣದ ಗಣಪತಿ ದೇವಾಲಯ ಬಳಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು, ಕಾಂಗ್ರೆಸ್ ಪಕ್ಷದ ಪರ ಘೋಷಣೆಗಳನ್ನು ಕೂಗಿ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಹಾಗೂ ಜನತೆ ಕಾಂಗ್ರೆಸ್ ಪಕ್ಷದ ಮೇಲಿಟ್ಟಿರುವ ನಂಬಿಕೆಯಿAದ ಮೂರು ವಿಧಾನಸಭೆಯ ಫಲಿತಾಂಶ ಕಾಂಗ್ರೆಸ್ ಪಕ್ಷದ ಪರವಾಗಿದೆ ಎಂದರು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ದಕ್ಷ ಆಡಳಿತವನ್ನು ಒಪ್ಪಿ, ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಜನತೆ ಜಯಶೀಲರನ್ನಾಗಿಸಿದ್ದಾರೆ. ಇದರಿಂದ ಮೈತ್ರಿಕೂಟದ ಮುಖಂಡರಿಗೆ ಮುಖಭಂಗವಾಗಿದೆ ಎಂದರು.
ಈ ಸಂದರ್ಭ ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರಾದ ಫಜûಲುಲ್ಲಾ, ತಾಲೂಕು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ರಜಾಕ್, ಎಚ್.ಡಿ. ಚಂದ್ರು, ಗಯಾಸುದ್ದಿನ್ ಮತ್ತಿತರರು ಇದ್ದರು.ಸೋಮವಾರಪೇಟೆ: ರಾಜ್ಯದ ಮೂರು ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯ ದಾಖಲಿಸಿದ ಹಿನ್ನೆಲೆ ಸೋಮವಾರಪೇಟೆ ಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕರ ಕಚೇರಿಯಿಂದ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದವರೆಗೆ ವಿಜಯೋತ್ಸವ ಮೆರವಣಿಗೆ ನಡೆಸಿದ ಕಾರ್ಯಕರ್ತರು, ವೃತ್ತದಲ್ಲಿ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು.
ಈ ಸಂದರ್ಭ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಗ್ಯಾರಂಟಿ ಯೋಜನೆಗಳು ಜನರಿಗೆ ಪ್ರಯೋಜನವಾಗಿವೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಗ್ಯಾರಂಟಿ ಯೋಜನೆ, ಬಿಪಿಎಲ್ ಕಾರ್ಡ್ ರದ್ದು ವಿಚಾರ ಹಾಗೂ ವಕ್ಫ್ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸಿದ್ದವು. ಆದರೂ ಪ್ರಜ್ಞಾವಂತ ಮತದಾರರು ಸುಳ್ಳುಗಳಿಗೆ ಕಿವಿಗೊಡದೇ ಕಾಂಗ್ರೆಸ್ ಬೆಂಬಲಿಸಿದ್ದಾರೆ ಎಂದರು.
ಅಲ್ಪಸAಖ್ಯಾತ ಘಟಕದ ಮುಖಂಡ ಕೆ.ಎ. ಯಾಕೂಬ್ ಮಾತನಾಡಿ, ಜನಪರವಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷಗಳ ಚಿತಾವಣೆ ಯನ್ನು ಜನತೆ ತಿರಸ್ಕರಿಸಿದ್ದಾರೆ. ಎಲ್ಲಾ ಜನಾಂಗದ ಹಿತ ಕಾಯುವ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದು ರಾಜ್ಯ ಸರ್ಕಾರದ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯಿಸಿದರು.
ಈ ಸಂದರ್ಭ ಪಕ್ಷದ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಸುನಿಲ್, ವಕ್ತಾರ ಅಬ್ದುಲ್ ರಜಾಕ್, ನಗರ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಎಸ್.ಎಂ. ಡಿಸಿಲ್ವಾ, ಬಿ.ಈ. ಜಯೇಂದ್ರ, ಸುಜಿತ್, ಜಮೀರ್ ಅಹಮ್ಮದ್, ಎಂ.ಎ. ರುಬೀನಾ, ಜಾನಕಿ ವೆಂಕಟೇಶ್, ಬಿ.ಜಿ. ಇಂದ್ರೇಶ್, ರಾಜಪ್ಪ, ಸೈಮನ್ ಜೇಕಬ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುಂಟಿಕೊಪ್ಪ: ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯದಲ್ಲಿ ೩ ಕ್ಷೇತ್ರಗಳಿಗೆ ನಡೆದ ಉಪಚುನಾ ವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋ ತ್ಸವವನ್ನು ಆಚರಿಸಿದರು.
ಕನ್ನಡ ವೃತದಲ್ಲಿ ಸುಂಟಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷ ರಫೀಕ್ಖಾನ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಒಗ್ಗೂಡಿ ಸೋನಿಯಗಾಂಧಿ, ರಾಹುಲ್ಗಾಂಧಿ, ಪ್ರಿಯಾಂಕಾ ವಾದ್ರ, ಕಾಂಗ್ರೆಸ್ ರಾಷ್ಟಿçÃಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಾಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲೆಯ ಶಾಸಕರು ಗಳಾದ ಎ.ಎಸ್. ಪೊನ್ನಣ್ಣ, ಡಾ. ಮಂತರ್ಗೌಡ ಅವರುಗಳಿಗೆ ಜಯ ಘೋಷಗಳನ್ನು ಕೂಗುತ್ತಾ ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಿಸಿದರು.
ಸುಂಟಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷ ರಫೀಕ್ಖಾನ್ ಇದೊಂದು ಅದ್ಭುತಪೂರ್ವ ವಿಜಯವಾಗಿದೆ ಮುಂದಿನ ದಿನಗಳಲ್ಲಿ ರಾಜ್ಯ ಸರಕಾರವು ಮತ್ತಷ್ಟು ಸುಭದ್ರಗೊಂಡಿದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಂ.ಎ. ವಸಂತ್, ಇಸಾಕ್ಖಾನ್, ಗ್ರಾ.ಪಂ. ಮಾಜಿ ಸದಸ್ಯ ರಜಾಕ್, ಮಾಜಿ ಅಧ್ಯಕ್ಷ ಕೆ.ಇ. ಕರೀಂ ಮತ್ತಿತರರು ಮಾತನಾಡಿದರು.
ಈ ಸಂದರ್ಭ ಪಂಚಾಯಿತಿ ಸದಸ್ಯರುಗಳಾದ ಆಲಿಕುಟ್ಟಿ, ಪಿ.ಎಫ್. ಸಬಾಸ್ಟೀನ್, ಮಾಜಿ ಅಧ್ಯಕ್ಷೆ ರೋಸ್ಮೇರಿ ರಾಡ್ರಿಗಸ್, ಕಾಂಗ್ರೆಸ್ ಕಾರ್ಯ ಕರ್ತರುಗಳಾದ ಶರೀಫ್, ಹಕೀಂ, ಹನೀಫ್ ಮತ್ತಿತರರು ಇದ್ದರು. ವೀರಾಜಪೇಟೆ: ಗಡಿಯಾರ ಕಂಬದ ಬಳಿ ಪಟಾಕಿ ಸಿಡಿಸಿ ಸಿಹಿ ಹಂಚಿ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.
ಈ ಸಂದರ್ಭ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ರಂಜಿ ಪೂಣಚ್ಚ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ ನೇತೃತ್ವದಲ್ಲಿ ಪುರಸಭೆ ಉಪಾಧ್ಯಕ್ಷೆ ತಸಿಯ ತಬುಸುಂ ಸೇರಿದಂತೆ ಪುರಸಭೆ ಸದಸ್ಯರು, ನಾಮನಿರ್ದೇಶನ ಸದಸ್ಯರು, ಕಾಂಗ್ರೆಸ್ ಮುಖಂಡರು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.ಐಗೂರು: ೩ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯ ಗಳಿಸಿದ ಹಿನ್ನೆಲೆ ಐಗೂರಿನಲ್ಲಿ ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಶನಿವಾರಸಂತೆ: ಕೊಡ್ಲಿಪೇಟೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ ಪ್ರಯುಕ್ತ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೆ.ಎಲ್.ಜನಾರ್ಧನ್ ನೇತೃತ್ವದಲ್ಲಿ ಕಾರ್ಯಕರ್ತರು ಬಸ್ ನಿಲ್ದಾಣದಲ್ಲಿ ಸಮಾವೇಶಗೊಂಡು ಸಾರ್ವಜನಿಕರಿಗೆ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭ ಕೊಡ್ಲಿಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಔರಂಗಜೇಬ್ ಮಾತನಾಡಿ, ಉಪ ಚುನಾವಣೆಯ ಈ ಗೆಲುವು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಆಡಳಿತಕ್ಕೆ ದೊರೆತ ಜಯ ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೆ.ಎಲ್.ಜನಾರ್ಧನ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಡವರ, ದೀನದಲಿತರ, ಹಿಂದೂಮುಸಲ್ಮಾನರ ಪರ ಇರುವುದರಿಂದ ಮೂರು ಕ್ಷೇತ್ರಗಳಲ್ಲೂ ಜನತೆ ಕಾಂಗ್ರೆಸ್ ಕೈ ಹಿಡಿದು ಗೆಲುವಿಗೆ ಕಾರಣರಾಗಿದ್ದಾರೆ ಎಂದರು.
ಕಾAಗ್ರೆಸ್ ಸೋಮವಾರಪೇಟೆ ವಲಯ ಸೋಶಿಯಲ್ ಮೀಡಿಯಾ ವಕ್ತಾರ ಅಬ್ದುಲ್ ರೆಹಮಾನ್, ಸಕ್ರಿಯ ಕಾರ್ಯಕರ್ತರಾದ ಸೋಮಣ್ಣ, ವಹಾಬ್, ನಿಖಿಲ್, ಶಿವು, ಎಚ್.ಎಂ. ರಘು ಇತರರು ಹಾಜರಿದ್ದರು.