ಸೋಮವಾರಪೇಟೆ, ನ. ೨೪: ಸಮೀಪದ ಬಿ.ಟಿ. ಚೆನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಸಾಧಕರಿಗೆ ಸನ್ಮಾನ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಉಪನ್ಯಾಸಕಿ ಕೆ.ಆರ್. ಜ್ಯೋತಿ ಮಾತನಾಡಿ, ವಿದ್ಯಾರ್ಥಿಗಳು ಕನ್ನಡತನವನ್ನು ರೂಢಿಸಿಕೊಳ್ಳಬೇಕು. ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಎಲ್ಲಾ ವಿದ್ಯಾರ್ಥಿಗಳು ನೋಂದಾಯಿಸಿ ಕೊಂಡು ಕನ್ನಡ ಚಳುವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಕವಿ ನ.ಲ. ವಿಜಯ ಅವರನ್ನು ಸನ್ಮಾನಿಸ ಲಾಯಿತು. ಈ ಸಂದರ್ಭ ಮಾತ ನಾಡಿದ ಅವರು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಸೊಗಡು ಇರಬೇಕು. ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹ ಪ್ರಾಧ್ಯಾಪಕ ಡಾ. ಬಿ.ಡಿ. ಹರ್ಷ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಎಚ್.ಜೆ. ಜವರಪ್ಪ, ಐಕ್ಯೂಎಸಿ ಸಂಚಾಲಕಿ ಎಂ.ಎA. ಸುನೀತಾ, ಸಾಂಸ್ಕೃತಿಕ ಸಮಿತಿಯ ಸಂಚಾಲಕ ಹೆಚ್. ಹುಚ್ಚೇಗೌಡ, ಸಹಾಯಕ ಪ್ರಾಧ್ಯಾಪಕ ವಿನೋದ್ ಬಿ.ಎಸ್. ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಾದ ನಾಸಿರ್, ಗೌತಮಿ, ರೇಖಾ, ಪ್ರಿಯಾಂಕಾ ಅವರು ಕಾರ್ಯಕ್ರಮ ನಿರ್ವಹಿಸಿದರು.