ಕಡಂಗ, ನ. ೨೪: ಕೊಕೇರಿ ಹಾಗೂ ಕೊಳಕೇರಿ ಗ್ರಾಮದ ಮುಖ್ಯ ರಸ್ತೆ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆಗೊಳಿಸಲು ಬಿಜೆಪಿ ಪ್ರಮುಖರು ಸಂಸದರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಸಂಸದರು ಈ ರಸ್ತೆಯ ಅವ್ಯವಸ್ಥೆಯನ್ನು ಬಗೆಹರಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು, ಮಡಿಕೇರಿ ಗ್ರಾಮಾಂತರ ಬಿಜೆಪಿ ಮಂಡಲ ಕಾರ್ಯದರ್ಶಿ ನೆಲ್ಲಚಂಡ ಕಿರಣ್ ಕಾರ್ಯಪ್ಪ, ಕುಮ್ಮಂಡ ಬಬ್ಬು, ಮಚ್ಚಂಡ ಮಂಜು, ಪೆಮ್ಮೆಂಡ ನಂದ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.