ಮಡಿಕೇರಿ, ನ. ೨೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ದಿನಾಚರಣೆ ತಾ.೨೬ ರಂದು (ಇಂದು) ಬೆಳಗ್ಗೆ ೧೦.೩೦ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ತಿಳಿಸಿದ್ದಾರೆ.

* ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ ತಾ.೨೬ ರಂದು (ಇಂದು) ಮಧ್ಯಾಹ್ನ ೨ ಗಂಟೆಗೆ ನಗರದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ.

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ರಾಜರಾಜೇಶ್ವರಿ ಸಂಸ್ಥೆಯ ಉಪಾಧ್ಯಕ್ಷರಾದ ದಾಕ್ಷಾಯಿಣಿ ವಾಸುದೇವ್, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ. ನಿರಂಜನ್, ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಚಿನ್ ವಾಸುದೇವ್, ಪ್ರಾಂಶುಪಾಲರಾದ ಮಂದಣ್ಣ ಇತರರು ಪಾಲ್ಗೊಳ್ಳಲಿದ್ದಾರೆ.