ವೀರಾಜಪೇಟೆ, ನ. ೨೫: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಘಟಕದಿಂದ ವೀರಾಜಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ವಾರ್ಷಿಕ ಕ್ರೀಡಾಕೂಟ ಮತ್ತು ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ವೀರಾಜಪೇಟೆಯ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಕ್ಯಾಪ್ಟನ್ ಹೊಸೋಕ್ಲು ಚಿನ್ನಪ್ಪ(ನಿ) ಅವರು ಕ್ರೀಡಾ ಜ್ಯೋತಿಯೊಂದಿಗೆ, ಬೈಕ್ ಮತ್ತು ಜೀಪ್‌ಗಳಲ್ಲಿ ಮಾಜಿ ಸೈನಿಕರು, ವೀರನಾರಿಯರೊಂದಿಗೆ ಮೆರವಣಿಗೆ ಯಲ್ಲಿ ಜೂನಿಯರ್ ಕಾಲೇಜು ಮೈದಾನಕ್ಕೆ ಬಂದು ಕ್ರೀಡಾಜ್ಯೋತಿ ಯನ್ನು ಪ್ರತಿಷ್ಠಾಪಿಸಲಾಯಿತು.

ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರು ಬಿಳಿ ಪಾರಿವಾಳ ಹಾರಿ ಬಿಡುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ದೀಪಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು, ಸೈನಿಕರ ತ್ಯಾಗ, ಬಲಿದಾನ, ಸೇವಾ ಮನೋಭಾವನೆ ಯಿಂದಾಗಿ ದೇಶ ಸ್ವತಂತ್ರವಾಗಿ ಅಭಿವೃದ್ಧಿಯತ್ತ ದಾಪುಗಾಲಿಡುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಯೋಧನಿಗೂ ಗೌರವ ಸಲ್ಲಿಸಬೇಕು ಎಂದರು.

ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಕ್ರೀಡಾಕ್ಷೇತ್ರವು ಇಚ್ಛಾಶಕ್ತಿ, ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ. ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಸೋಲು ಕೊನೆಯಲ್ಲ. ಸೋಲೇ ಗೆಲುವಿನ ಸೋಪಾನ. ಕ್ರೀಡೆಯಲ್ಲಿ ಪರಿಣಿತರಾದವರಿಗೆ ಎಲ್ಲಾ ಕ್ಷೇತ್ರದಲ್ಲೂ ಹಲವಾರು ಅವಕಾಶಗಳಿವೆ. ಕ್ರೀಡೆಯಿಂದ ಶಿಸ್ತು, ಸಂಯಮ ಮೂಡುತ್ತದೆ ಎಂದರು.

ಮಾಜಿ ಯೋಧರ ಸಂಘ ಅರೆಸೇನಾಪಡೆಯ ಸಂಚಾಲಕರಾದ ನೂರೇರ ಭೀಮಯ್ಯ ಮಾತನಾಡಿ, ಇಲ್ಲಿಯವರೆಗೆ ಇಂತಹ ಯಾವುದೇ ಕ್ರೀಡಾಕೂಟಗಳಿಗೆ ಅರೆಸೇನಾಪಡೆಯ ನಿವೃತ್ತ ಯೋಧರನ್ನು ಯಾವುದೇ ಸಂಘಟನೆಗಳು ಆಹ್ವಾನಿಸಿರಲಿಲ್ಲ. ಇದೇ ಮೊದಲ ಬಾರಿಗೆ ಅಖಿಲ ಕರ್ನಾಟಕ ಮಾಜಿ ಯೋಧರ ಸಂಘದ ಕೊಡಗು ಘಟಕ ಆಹ್ವಾನಿಸಿದ್ದು ಹೆಮ್ಮೆ ತಂದಿದೆ ಎಂದರು.

ಅAತರಾಷ್ಟಿçÃಯ ಮಟ್ಟದ ಅಥ್ಲೀಟ್, ಮಾಜಿ ಯೋಧರು ಹಾಗೂ ಕ್ರೀಡಾ ಸಂಚಾಲಕರಾದ ಹೊಸೊಕ್ಲು ಚಿನ್ನಪ್ಪ ಮಾತನಾಡಿ, ಸಂಘದ ಮೂಲಕ ಸೇನೆಗೆ ಸೇರ್ಪಡೆ ಬಯಸುವ ಮಕ್ಕಳಿಗೆ ತರಬೇತಿ, ಮಾಜಿ ಯೋಧರ ಸಂಕಷ್ಟಗಳ ಪರಿಹಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಾ ಬರಲಾಗುತ್ತಿದೆ. ಸಂಘದಿAದ ಮಾಜಿ ಸೈನಿಕರಿಗೆ ಸಾಕಷ್ಟು ಅನುಕೂಲವಾಗಿದೆ ಎಂದರು.

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಘಟಕದ ಅಧ್ಯಕ್ಷ ಕೊಟ್ಟುಕತ್ತಿರ ಪಿ. ಸೋಮಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಸಾಲಿನ ಕ್ರೀಡಾಕೂಟದಲ್ಲಿ ಮಾಜಿ ಸೈನಿಕರುಗಳಿಗೆ ವೀರನಾರಿಯರಿಗೆ, ಅವರ ಅವಲಂಬಿತರಿಗೆ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಬಾರಿ ಕ್ರೀಡಾಕೂಟದಲ್ಲಿ ಅರೆಸೇನಾ ಪಡೆಗಳ ಮಾಜಿ ಯೋಧರು ಮತ್ತು ಅವರ ಕುಟುಂಬಸ್ಥರಿಗೂ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.

ಕ್ರೀಡಾಕೂಟದ ಸಂದರ್ಭ ಬೆಂಗಳೂರಿನ ಆಸ್ಪರ್ ಆಸ್ಪತ್ರೆಯ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು. ಇದೇ ಸಂದರ್ಭ ಅಗತ್ಯ ಬಿದ್ದವರಿಗೆ ಇಸಿಜಿ ಪರೀಕ್ಷೆ ಕೂಡ ಮಾಡಲಾಯಿತು.

ಕ್ರೀಡಾಕೂಟದಲ್ಲಿ ೩೦ ಬಗೆಯ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸೇನೆ ಸೇರ್ಪಡೆಗೆ ಅನುಕೂಲವಾಗುವಂತೆ ೮೦೦ ಮೀಟರ್ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಸಮಾರೋಪ ಸಮಾರಂಭದಲ್ಲಿ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಸುಧೀರ್, ಮಾಜಿ ಸೈನಿಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಕ್ರೀಡಾಕೂಟದ ಸಂಚಾಲಕ ಕುಟ್ಟಂಡ ಲವ ಪೊನ್ನಪ್ಪ, ಕಾರ್ಯದರ್ಶಿ ಸಿ.ಜಿ. ತಿಮ್ಮಯ್ಯ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.