ವೀರಾಜಪೇಟೆ, ನ. ೨೮: ಸುಂಕದಕಟ್ಟೆಯಿAದ ವೀರಾಜಪೇಟೆ ಮುಖ್ಯರಸ್ತೆ ಡಾಂಬರೀಕರಣ ಕಾಮಗಾರಿಗೆ ವೀರಾಜಪೇಟೆ ಪುರಸಭೆ ಅಧ್ಯಕ್ಷೆ ಮನೆಯಪಂಡ ದೇಚಮ್ಮ ಕಾಳಪ್ಪ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷ ಹನೀಫ್, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷ ಕೋಳುಮಂಡ ರಫೀಕ್, ಕಾಂಗ್ರೆಸ್ ಮುಖಂಡರಾದ ಗಣೇಶ್ ಮೊದಲಿಯಾರ್, ಮಹದೇವ್, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಹರೀಶ್, ಪುರಸಭಾ ಸದಸ್ಯರಾದ ರಾಜೇಶ್ ಪದ್ಮನಾಭ್ ಎಸ್.ಹೆಚ್. ಮತೀನ್, ನಾಮ ನಿರ್ದೇಶಕ ಸದಸ್ಯರಾದ ಕೆ. ಸಿ. ಶಬರೀಶ್ ಶೆಟ್ಟಿ, ಆತಿಫ್ ಮುನ್ನಾ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಅಯೂಬ್ ಹಾಜರಿದ್ದರು.