ಕಡಂಗ: ಕಡಂಗದ ಸ.ಹಿ.ಪ್ರಾ. ಶಾಲೆಯಲ್ಲಿ ಶಾರದಾ ಪೂಜಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಸಂದರ್ಭ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಶಾಲಾ ಮುಖ್ಯ ಶಿಕ್ಷಕರಾದ ಶಾಂತಿಕುಮಾರಿ ಪಿ.ಎಂ., ಶಾಲಾ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು. ಪೂಜಾ ವಿಧಿವಿಧಾನಗಳನ್ನು ಕೀರ್ತೀಶ್ ನೆರವೇರಿಸಿದರು.

ನಾಲಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಚೆಯ್ಯಂಡಾಣೆ: ಕಕ್ಕಬ್ಬೆ ಸಮೀಪದ ನಾಲಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾರದ ಪೂಜೆಯನ್ನು ಆಚರಿಸಲಾಯಿತು.

ಈ ಸಂದರ್ಭ ಮುಖ್ಯ ಶಿಕ್ಷಕಿ ರಜೀನಾ, ಅತಿಥಿ ಶಿಕ್ಷಕಿ ಸಂಜು ಸಾರಿಕಾ, ಅಂಗನವಾಡಿ ಕಾರ್ಯಕರ್ತೆ ಲೀಲಾವತಿ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಗುಡ್ಡೆಹೊಸೂರು ಸರಕಾರಿ ಮಾದರಿ ಪ್ರಾಥಮಿಕ ಶಾಲೆ

ಗುಡ್ಡೆಹೊಸೂರು: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾರದಾ ಪೂಜೆಯನ್ನು ಆಚರಿಸಲಾಯಿತು. ಪೂಜಾ ಕಾರ್ಯವನ್ನು ಕುಶಾಲನಗರದ ಸೋಮೇಶ್ವರ ದೇವಸ್ಥಾನದ ಅರ್ಚಕ ಮಂಜುನಾಥ್ ಭಟ್ ನೆರವೇರಿಸಿದರು. ಈ ಸಂದರ್ಭ ಎಸ್.ಡಿ. ಎಂ.ಸಿ. ಅಧ್ಯಕ್ಷ ನಾಗೇಂದ್ರ, ಶಾಲೆಯ ಮುಖ್ಯಶಿಕ್ಷಕ ಸಣ್ಣಸ್ವಾಮಿ, ಸಹಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ. ಸದಸ್ಯರು ಹಾಜರಿದ್ದರು.