ಮಡಿಕೇರಿ, ನ. ೩೦: ದೇಶದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ಯುವಜನತೆ ಸಂಘಟನಾತ್ಮಕವಾಗಿ ತೊಡಗಿಸಿಕೊಳ್ಳುವಂತಾಗಬೇಕೆAದು ಚಿಕ್ಕಅಳುವಾರದ ಕೊಡಗು ವಿಶ್ವ ವಿದ್ಯಾಲಯದ ಉಪ ಕುಲಪತಿ ಪ್ರೊ . ಅಶೋಕ್ ಸಂಗಪ್ಪ ಆಲೂರ ಅಭಿಮತ ವ್ಯಕ್ತಪಡಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವೀರಾಜಪೇಟೆ ಹಾಗೂ ಸೋಮವಾರಪೇಟೆ ತಾಲೂಕು ಯುವ ಒಕ್ಕೂಟ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಎಫ್‌ಎಂಕೆಎAಸಿ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ಯುವ ಜನೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಪಂಚ ೨೧ನೇ ಶತಮಾನದಲ್ಲಿ ಮುಂದುವರಿಯುತ್ತಿದ್ದು, ಯುವಶಕ್ತಿ ಭಾರತವನ್ನು ಪ್ರಗತಿ ಪಥದತ್ತ ಕೊಂಡೊಯ್ಯುವಲ್ಲಿ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಮುನ್ನಡೆಯುವಂತಾಗಬೇಕು. ಭಾರತ ಕಂಡ ಅಪ್ರತಿಮ ಯುವಶಕ್ತಿ ಅಧ್ಯಾತ್ಮಿಕ ಚಿಂತಕ ಸ್ವಾಮಿ ವಿವೇಕಾನಂದರ ಗುಣಗಾನವನ್ನು ಮಾಡಿದ ಅಶೋಕ್ ಸಂಗಪ್ಪ ಅವರು, ಇಂದು ಯುವಶಕ್ತಿ, ನಾಡಿನ ಬಹುದೊಡ್ಡ ಸಂಪತ್ತು. ಅದರಲ್ಲಿರುವ ಪ್ರತಿಭೆಗಳನ್ನು ಗುರುತಿಸಿ, ಹೊರತರುವಲ್ಲಿ ಇಂತಹ ಜನೋತ್ಸವ ಮಾದರಿಯಾಗಿದೆಯೆಂದು ಪ್ರಶಂಸೆ ವ್ಯಕ್ತಪಡಿಸಿದರು. ಯುವ ಜನತೆಯನ್ನು ದೇಶದ ಶಕ್ತಿಯಾಗಿ ಬೆಳೆಸುವಲ್ಲಿ ಗುರುಗಳಾದ ಬೋಧಕರು ಸೂಕ್ತವಾದ ಮಾರ್ಗದರ್ಶನ, ಬೋಧನೆ ನೀಡುವಂತಾಗಬೇಕೆAದು ಕಿವಿಮಾತು ಹೇಳಿದರು.

ಸಮಾರಂಭವನ್ನು ಉದ್ದೇಶಿಸಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ. ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯ ಚಕ್ರವರ್ತಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಎಫ್‌ಎಂಕೆಎAಸಿ ಕಾಲೇಜಿನ ಪ್ರಾಂಶುಪಾಲ ಮೆ. ಡಾ. ರಾಘವ ವಹಿಸಿ ಮಾತನಾಡಿ, ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವ ಬದಲಾಗಿ ಇಂದಿನ ಯುವಜನತೆ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ಕಳವಳಕಾರಿ ಸಂಗತಿ. ಈ ನಿಟ್ಟಿನಲ್ಲಿ ಯುವಜನತೆ ಎಚ್ಚರಿಕೆ ವಹಿಸಿಕೊಳ್ಳುವುದರ ಮೂಲಕ ಸುಸ್ಥಿರ ಬದುಕನ್ನು ರೂಪಿಸಿಕೊಂಡು, ಸಮಾಜದ ಅಭಿವೃದ್ಧಿಗೆ ಶ್ರಮಿಸುವಂತಾಗಬೇಕೆAದರು.

ವೇದಿಕೆಯಲ್ಲಿ ಮಡಿಕೇರಿ ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್, ಜಿಲ್ಲಾ ಯುವ ಒಕ್ಕೂಟದ ಖಜಾಂಚಿ ಕುಂಜಿಲನ ಮಧು ಮೋಹನ್, ಒಕ್ಕೂಟದ ಕಾರ್ಯದರ್ಶಿ ಜಯಕುಮಾರ್, ಸದಸ್ಯೆ ಕೇಕಡ ಇಂದುಮತಿ ಉಪಸ್ಥಿತರಿದ್ದರು. ಯುವ ಜನೋತ್ಸವದಲ್ಲಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ಜರುಗಿ ವಿಜೇತ ತಂಡಗಳಿಗೆ ಪಾರಿತೋಷಕ, ಪ್ರಶಸ್ತಿ ಪತ್ರ ಹಾಗೂ ನಗದನ್ನು ನೀಡಲಾಯಿತು.

ಕಾಲೇಜು ವಿದ್ಯಾರ್ಥಿನಿಯರಾದ ಸ್ವಪ್ನ ಮತ್ತು ಚೋಂದಮ್ಮ ಪ್ರಾರ್ಥಿಸಿ, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಕೂಡಂಡ ಸಾಬ ಸುಬ್ರಮಣಿ ನಿರೂಪಿಸಿ, ಜಿಲ್ಲಾ ಒಕ್ಕೂಟದ ಸದಸ್ಯ ನವೀನ್ ದೇರಳ ವಂದಿಸಿದರು.