ವೀರಾಜಪೇಟೆ, ಜ. ೮: ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟಂತೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಶಾಸಕರ ಗೃಹ ಕಛೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಇಲಾಖಾವಾರು ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಕಾಮಗಾರಿಗಳು ಕುಂಠಿತಗೊAಡ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳೊಂದಿಗೆ ವಿವರಣೆ ಕೇಳಿದರಲ್ಲದೆ ಕಾಮಗಾರಿಗಳ ಗುಣಮಟ್ಟದ ಪೂರ್ಣಗೊಳ್ಳುವಿಕೆಗೆ ಕಾಲಮಿತಿಯನ್ನು ನಿಗದಿಪಡಿಸಿದರು.

ಈ ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ವೀರಾಜಪೇಟೆ ತಾಲೂಕು ತಹಶೀಲ್ದಾರ್ ಎಚ್.ಎನ್. ರಾಮಚಂದ್ರ, ವೀರಾಜಪೇಟೆ ಚೆಸ್ಕ್ ಸಹಾಯಕ ಅಭಿಯಂತರ ಸುರೇಶ್, ಶಿಕ್ಷಣ ಇಲಾಖೆ, ಕಂದಾಯ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇತರ ಇಲಾಖೆ ಅಧಿಕಾರಿಗಳು, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಸದಸ್ಯರಾದ ರಾಜೇಶ್ ಪದ್ಮನಾಭ, ಮತೀನ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಅಧ್ಯಕ್ಷ ಹನೀಫ್, ಮತ್ತಿತರರು ಉಪಸ್ಥಿತರಿದ್ದರು.