ನಕ್ಸಲ್ ಮುಕ್ತ ಕರ್ನಾಟಕ: ಆರು ನಕ್ಸಲೀಯರು ಶರಣು

ಬೆಂಗಳೂರು, ಜ. ೮: ಕರ್ನಾಟಕದ ‘ರಕ್ತ ಚರಿತ್ರೆ' ಇತಿಹಾಸದಲ್ಲಿ ಬುಧವಾರ ಮಹತ್ವದ ದಿನವಾಗಿದೆ. ೬ ಮಂದಿ ನಕ್ಸಲೀಯರು ಶಸ್ತಾçಸ್ತçಗಳನ್ನು ತ್ಯಜಿಸಿದ್ದು, ಸರ್ಕಾರದ ಶರಣಾಗತಿ ಪ್ಯಾಕೇಜ್ ಒಪ್ಪಿಕೊಂಡು ಶರಣಾಗಿದ್ದಾರೆ. ಈ ಮೂಲಕ ಸಮಾಜದ ಮುಖ್ಯವಾಹಿನಿಗೆ ಮರಳಿದ್ದು, ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗುವ ಕಾಲ ಸಮೀಪಿಸಿದಂತಾಗಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯದ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲದ ಸುಂದರಿ, ಮಾರಪ್ಪ ಅರೋಳಿ, ವನಜಾಕ್ಷಿ ಬಾಳೆಹೊಳೆ ಹಾಗೂ ಕೇರಳದ ವೈನಾಡಿನ ಎನ್. ಜೀಶಾ ಹಾಗೂ ತಮಿಳುನಾಡಿನ ಕೆ. ವಸಂತ್ ಅವರು ಹಸಿರು ಬಟ್ಟೆ ಕಳಚಿಟ್ಟು, ಕೆಂಪು ಬಾವುಟ ಕೆಳಗಿಟ್ಟು ಶರಣಾದರು. ಈ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಪೊಲೀಸರು ಶರಣಾದ ನಕ್ಸಲರನ್ನು ತಮ್ಮ ವಶಕ್ಕೆ ಪಡೆಯಲಿದ್ದು, ಕೋರ್ಟ್ಗೆ ಹಾಜರುಪಡಿಸಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಿದ್ದಾರೆ. ಇದರೊಂದಿಗೆ ಹಲವು ದಶಕಗಳಿಂದ ಸರ್ಕಾರಕ್ಕೆ ತಲೆ ನೋವಾಗಿದ್ದ ನಕ್ಸಲ್ ಚಳವಳಿ ಬಹುತೇಕ ಅಂತ್ಯವಾಗುವ ಮುನ್ಸೂಚನೆ ಕಂಡು ಬಂದಿದೆ. ಮೂಲಗಳ ಪ್ರಕಾರ ರಾಜ್ಯದಲ್ಲಿ ಇನ್ನೂ ಓರ್ವ ನಕ್ಸಲ್ ಮಾತ್ರ ಶರಣಾಗತಿಗೆ ಬಾಕಿ ಉಳಿದಿದ್ದು. ಆತನ ಶರಣಾಗತಿಗೆ ಪ್ರಯತ್ನ ನಡೆಸಲಾಗುತ್ತಿದೆ. ಇದರೊಂದಿಗೆ ರಾಜ್ಯದಲ್ಲಿ ಎರಡೂವರೆ ದಶಕಗಳ ಕಾಲದ ನಕ್ಸಲ್ ಚಳವಳಿ ಅಂತ್ಯ ಕಂಡAತಾಗುತ್ತದೆ.

ಎಸೆನ್ಸ್ ಕುಡಿದು ಈರ್ವರು ಖೈದಿಗಳ ಸಾವು

ಮೈಸೂರು, ಜ. ೮: ನಶೆಗಾಗಿ ಕೇಕ್ ತಯಾರಿಸಲು ತರಿಸಿದ್ದ ಎಸೆನ್ಸ್ ಕುಡಿದ ಖೈದಿಗಳು ಅಸ್ವಸ್ಥರಾದ ಘಟನೆ ಮೈಸೂರಿನಲ್ಲಿ ಡಿ. ೨೮ ರಂದು ನಡೆದಿದೆ. ಅಸ್ವಸ್ಥರಾಗಿದ್ದ ಖೈದಿಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು ನಿನ್ನೆ ಓರ್ವ ಮೃತಪಟ್ಟಿದ್ದು ಮತ್ತೊಬ್ಬ ಖೈದಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾನೆ. ಮೃತ ಖೈದಿಯನ್ನು ಚಾಮರಾಜನಗರದ ನಾಗರಾಜು ಎಂದು ತಿಳಿದುಬಂದಿದೆ. ಹೊಸವರ್ಷದ ಕೇಕ್ ತಯಾರಿಸಲು ತರಿಸಲಾಗಿದ್ದ ಎಸೆನ್ಸ್ ಬೇಕರಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಖೈದಿಗಳು ಡಿ. ೨೮ ರಂದು ಕುಡಿದಿದ್ದು ಯಾರಿಗೂ ಹೇಳದೆ ಸುಮ್ಮನಾಗಿದ್ದರು. ಮೂವರಿಗೂ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಜೈಲಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹೊಟ್ಟೆ ನೋವು ಕಡಿಮೆಯಾಗದ ಹಿನ್ನೆಲೆ ಕೆ ಆರ್ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಯೂ ಖೈದಿಗಳು ಎಸೆನ್ಸ್ ಕುಡಿದ ವಿಷಯ ಮುಚ್ಚಿಟ್ಟಿದ್ದು ಬಳಿಕ ವೈದ್ಯರು ಈ ಬಗ್ಗೆ ಪ್ರಶ್ನಿಸಿದಾಗ ಮೂವರು ಸತ್ಯ ಹೇಳಿದ್ದಾರೆ. ಅದಾಗಲೇ ಸಾಕಷ್ಟು ವಿಳಂಬವಾದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಮೈಸೂರಿನ ಸಾತಗಳ್ಳಿಯ ಮಾದೇಶ್ ಮೃತಪಟ್ಟಿದ್ದು ಇಂದು ಮತ್ತೋರ್ವ ಮೃತಪಟ್ಟಿದ್ದಾನೆ. ಮತ್ತೊಬ್ಬ ಖೈದಿ ರಮೇಶ್ ಅವರ ಪರಿಸ್ಥಿತಿ ಸಹಾ ಗಂಭೀರವಾಗಿದ್ದು ತೀವ್ರನಿಗಾದಲ್ಲಿ ಚಿಕೆತ್ಸೆ ಪಡೆಯುತ್ತಿದ್ದಾರೆ. ಈ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಉಪಕುಲಪತಿಗಳ ನೇಮಕ : ಕೇಂದ್ರದ ಕ್ರಮ ಖಂಡನೀಯ

ಬೆAಗಳೂರು, ಜ. ೮: ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಗೆ ಸಂಬAಧಿಸಿದAತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಿತ್ತುಕೊಳ್ಳಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯ. ರಾಜ್ಯ ಸರ್ಕಾರಗಳ ಅಧಿಕಾರವನ್ನು ಮೊಟಕುಗೊಳಿಸುವ ಸಣ್ಣ ಅವಕಾಶವನ್ನೂ ಬಿಟ್ಟುಕೊಡದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಕಣ್ಣು ಈಗ ರಾಜ್ಯದ ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ. ಯುಜಿಸಿ ನೇಮಕಾತಿಗೆ ಸಂಬAಧಿಸಿದAತೆ ಬಿಡುಗಡೆ ಮಾಡಲಾದ ಕರಡು ನಿಯಮಾವಳಿಗಳನ್ನು ನಮ್ಮ ಸರ್ಕಾರ ಪರಿಶೀಲಿಸಿ, ಇದರ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯೋಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿಗಾಗಿ ರಾಷ್ಟçಮಟ್ಟದ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಅರ್ಜಿಗಳನ್ನು ಆಹ್ವಾನಿಸಬೇಕೆಂದು ಯುಜಿಸಿ ಹೊಸ ನಿಯಮಾವಳಿಗಳು ಹೇಳುತ್ತಿದೆ. ಇಲ್ಲಿಯವರೆಗೆ ಆಯಾ ರಾಜ್ಯಗಳ ವಿದ್ವಾಂಸರಿಗಷ್ಟೇ ಸೀಮಿತವಾಗಿದ್ದ ರಾಜ್ಯಪಾಲರ ಹುದ್ದೆ ಹೊಸ ನಿಯಮಗಳು ಜಾರಿಗೆ ಬಂದರೆ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಸ್ಥಾನದಲ್ಲಿ ಅನ್ಯಭಾಷಿಕರು ಬಂದು ಕೂರುವ ಅಪಾಯ ಇದೆ. ಉಪಕುಲಪತಿಗಳ ನೇಮಕಾತಿಯ ಅರ್ಹತೆಗೆ ಸಂಬAಧಿಸಿದAತೆಯೂ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರು ಅನಗತ್ಯವಾಗಿ ಮೂಗುತೂರಿಸುತ್ತಾ ಬಂದಿದ್ದಾರೆ. ಎಷ್ಟೋ ಸಂದರ್ಭಗಳಲ್ಲಿ ರಾಜ್ಯ ಸರ್ಕಾರದ ಶಿಫಾರಸನ್ನು ನಿರ್ಲಕ್ಷಿಸಿ ತಮ್ಮ ಆಯ್ಕೆಯನ್ನು ನಮ್ಮ ಮೇಲೆ ಹೇರುತ್ತಿದ್ದಾರೆ. ಶಿಕ್ಷಣ ಕ್ಷೇತ್ರದ ನಿರ್ವಹಣೆ ರಾಜ್ಯ ಸರ್ಕಾರದ ಪರಮಾಧಿಕಾರವಾಗಿದ್ದು ಇದರಲ್ಲಿ ಅನಗತ್ಯವಾದ ಮಧ್ಯಪ್ರವೇಶದಿಂದಾಗಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಘರ್ಷಣೆ ಏರ್ಪಡುವ ಸಾಧ್ಯತೆ ಇದೆ. ಒಕ್ಕೂಟ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂತಹ ನಡವಳಿಕೆಗಳನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ. ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಜೊತೆಯಲ್ಲಿ ಈ ಬಗ್ಗೆ ಚರ್ಚಿಸಿ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.