ಶನಿವಾರಸಂತೆ, ಜ. ೮: ಸ್ವಾಸ್ಥö್ಯ ಸಮಾಜದ ನಿರ್ಮಾಣದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮ ಅನುಕರಣೀಯವಾಗಿದೆ ಎಂದು ಕೊಡ್ಲಿಪೇಟೆ ಕಲ್ಲುಮಠದ ಮಹಾಂತ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.

ಸಮೀಪದ ಕೊಡ್ಲಿಪೇಟೆಯ ಎಸ್.ಕೆ.ಎಸ್.ವಿದ್ಯಾಸಂಸ್ಥೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೊಡ್ಲಿಪೇಟೆ ವಲಯ ಹಾಗೂ ಸೋಮವಾರಪೇಟೆ ಬಿ.ಸಿ.ಟ್ರಸ್ಟ್ ಸಹಭಾಗಿತ್ವದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಾಣವಾಗಬೇಕಾದರೆ ವಿದ್ಯಾರ್ಥಿ ಗಳಿಗೆ ನೈತಿಕ ಶಿಕ್ಷಣದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ.ವಿದ್ಯಾರ್ಥಿಗಳು ಉತ್ತಮ ಸಂಸ್ಕಾರದೊAದಿಗೆ ಗುರು-ಹಿರಿಯರನ್ನು ಗೌರವಿಸುವ ಗುಣವನ್ನೂ ಬೆಳೆಸಿಕೊಳ್ಳಬೇಕು ಎಂದರು. ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯ ಭಗವಾನ್ ಮಾತನಾಡಿ, ಜನ ಜಾಗೃತಿ ವೇದಿಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಯುವ ಜನಾಂಗದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸ್ವಾಸ್ಥö್ಯ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಈ ಮೂಲಕ ಸ್ವಾಸ್ಥö್ಯ ಸಮಾಜ ನಿರ್ಮಾಣ ಮಾಡಲು ಪ್ರಯತ್ನಿಸುತ್ತಿದೆ ಎಂದರು.

ಸAಪನ್ಮೂಲ ವ್ಯಕ್ತಿ ಶನಿವಾರಸಂತೆ ಶ್ರೀವಿಘ್ನೇಶ್ವರ ಬಾಲಕಿಯರ ಪ್ರೌಢಶಾಲಾ ಶಿಕ್ಷಕ ಕೆ.ಪಿ. ಜಯಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಮಾನಸಿಕ ಹಾಗೂ ದೈಹಿಕವಾಗಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕಾಗುತ್ತದೆ.ಮಾದಕ ದ್ರವ್ಯ ಸೇವನೆಯ ಚಟದಿಂದ ದೂರವಿರಬೇಕು.ದುರಭ್ಯಾಸಗಳು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿ ಜೀವನವೇ ನಾಶವಾಗುತ್ತದೆ ಎಂದು ಎಚ್ಚರಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡ್ಲಿಪೇಟೆ ವಲಯ ಮೇಲ್ವಿಚಾರಕ ನಾಗರಾಜ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಬಿ.ಎಸ್. ಪ್ರದೀಪ್, ಶಿಕ್ಷಕರು ಹಾಗೂ ಸೇವಾ ಪ್ರತಿನಿಧಿ ಕವಿತಾ ಹಾಜರಿದ್ದರು.