ಮಡಿಕೇರಿ, ಜ. ೯: ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ ವತಿಯಿಂದ ತಾ. ೧೪ ರಂದು ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಭಾವಂತ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ಮಾಹಿತಿ ನೀಡಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ೩೪ ವರ್ಷಗಳಿಂದ ಶೈಕ್ಷಣಿಕವಾಗಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಕ್ಕಳಲ್ಲಿ ಸ್ಫೂರ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ. ಇದರ ಭಾಗವಾಗಿ ತಾ. ೧೪ ರಂದು ನಗರದ ಮೈತ್ರಿ ಭವನದಲ್ಲಿ ಬೆಳಿಗ್ಗೆ ೧೧ ಗಂಟೆಗೆ ೩೫ನೇ ವರ್ಷದ ಕಾರ್ಯಕ್ರಮ ನಡೆಯಲಿದೆ. ಎಸ್.ಎಸ್.ಎಲ್.ಸಿ., ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ವೈದ್ಯಕೀಯ, ಇಂಜಿನಿಯರ್, ಡಿಪ್ಲೋಮ ಸೇರಿದಂತೆ ಇನ್ನಿತರ ಶಿಕ್ಷಣದಲ್ಲಿ ಶೇ. ೭೦ಕ್ಕಿಂತ ಹೆಚ್ಚು ಅಂಕ ಪಡೆದು ತೇರ್ಗಡೆಯಾದವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಮಾತನಾಡಿ, ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿ ಡಾ. ಹೆಚ್.ವಿ. ದೇವದಾಸ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಭಾಷಣಗಾರರಾಗಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಹಪ್ರಾಧ್ಯಾಪಕಿ ಹೆಚ್.ಪಿ. ನಿರ್ಮಲ, ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಭಾಗವಹಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿಲ್ಲಾ ಶಸ್ತçಚಿಕಿತ್ಸಕ ಡಾ. ನಂಜುAಡಯ್ಯ, ಶ್ರೀ ರಾಜರಾಜೇಶ್ವರಿ ದೇವಾಲಯ ಧರ್ಮದರ್ಶಿ ಹೆಚ್.ಎಸ್.ಗೋವಿಂದಸ್ವಾಮಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಸೂತಿ ತಜ್ಞೆ ಡಾ. ಸೌಮ್ಯ ಪ್ರಕಾಶ್, ಸಮಾಜ ಸೇವಕ ದಂಬೇಕೋಡಿ ಭೀಷ್ಮ ಮಾದಪ್ಪ, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೇಕಲ್ಲು ಕುಶಾಲಪ್ಪ, ನಗರಸಭಾ ಸದಸ್ಯ ಎಸ್.ಸಿ. ಸತೀಶ್, ಕಾಂಗ್ರೆಸ್ ಸಾಮಾಜಿಕ ಜಾಲತಾಣ ಘಟಕದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಉದ್ಯಮಿ ವಿ.ಎಂ. ಶರೀನ್, ದಸಂಸ ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಸಮಾಜ ಸೇವಕ ಪ್ರದೀಪ್ ಕರ್ಕೆರ, ಅಶೋಕಪುರದ ವೀರಭದ್ರ ಪಾಷಣಮೂರ್ತಿ ದೇವಾಲಯ ಮುಖ್ಯಸ್ಥ ವರದರಾಜ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಆರ್. ಸುರೇಶ್ ಸೇರಿದಂತೆ ಸಂಘಟನೆ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಅರ್ಹ ವಿದ್ಯಾರ್ಥಿಗಳು ತಾ. ೧೦ ರೊಳಗೆ ಅಂಕಪಟ್ಟಿ ಹಾಗೂ ಜಾತಿ ದೃಢೀಕರಣ ಪತ್ರವನ್ನು ದಲಿತ ಸಂಘರ್ಷ ಸಮಿತಿ ಕಚೇರಿ, ಗಂಗೋತ್ರಿ ಕಟ್ಟಡ, ಮಡಿಕೇರಿ ಈ ವಿಳಾಸಕ್ಕೆ ಅಥವಾ ಮೊಬೈಲ್ ಸಂಖ್ಯೆ ೯೪೮೧೫೨೩೬೪೮, ೯೬೧೧೭೬೬೭೧೩ ಸಂಖ್ಯೆಗೆ ಕಳುಹಿಸಬಹುದಾಗಿದೆ ಎಂದರು.

ಗೋಷ್ಠಿಯಲ್ಲಿ ವಿಭಾಗೀಯ ಸಂಚಾಲಕ ವೀರಭದ್ರಯ್ಯ, ಜಿಲ್ಲಾ ಸಂಘಟನಾ ಸಂಚಾಲಕ ಡಿ.ಜೆ. ಈರಪ್ಪ, ಪೊನ್ನಂಪೇಟೆ ತಾಲೂಕು ಸಂಚಾಲಕ ಹೆಚ್.ಆರ್. ಜಗದೀಶ್, ಮಹಿಳಾ ಘಟಕ ಸಂಚಾಲಕಿ ಪಿ.ಆರ್. ಸೀತಾ ಹಾಜರಿದ್ದರು.