ಪೊನ್ನಂಪೇಟೆ, ಜ. ೯: ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಮಾರೋಪ ಸಮಾರಂಭ ಕಾರ್ಯಕ್ರಮ ತಾ. ೧೦ (ಇಂದು) ರಂದು ಬೆಳಿಗ್ಗೆ ೧೦.೩೦ ಕ್ಕೆ ಚಕ್ಕೆರ ಮುತ್ತಣ್ಣ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಮಂಡೆಪAಡ ಮುತ್ತಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಗಾಯಕಿ ಬೊಟ್ಟೋಳಂಡ ಅಶಿತ ಬೋಪಣ್ಣ, ಕಾವೇರಿ ಎಜುಕೇಷನ್ ಸೊಸೈಟಿ ಗೌ. ಕಾರ್ಯದರ್ಶಿ ಕುಲ್ಲಚಂಡ ಪಿ. ಬೋಪಣ್ಣ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.