ವೀರಾಜಪೇಟೆ, ಜ. ೧೦: ಯೋಗ ಮತ್ತು ಧ್ಯಾನದಿಂದ ಆರೋಗ್ಯ ಉತ್ತಮವಾಗಿರಲು ಸಾಧ್ಯವಾಗುತ್ತದೆ ಎಂದು ರಾಜ್ಯ ವೈಜ್ಞಾನಿಕ ಪರಿಷತ್ ಕೊಡಗು ಜಿಲ್ಲಾ ಅಧ್ಯಕ್ಷೆ ವನಿತ ಚಂದ್ರಮೋಹನ್ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವೀರಾಜಪೇಟೆ ಮಹಿಳಾ ಸಮಾಜದ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ ‘ಆರೋಗ್ಯವಂತ ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ' ಎಂಬ ವಿಷಯದ ಬಗ್ಗೆ ಮಾತನಾಡಿದ ಅವರು, ಮಹಿಳೆ ತನ್ನ ಆರೋಗ್ಯದ ಕಡೆಗೂ ಗಮನ ಹರಿಸಬೇಕು. ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡಬೇಕು. ಊಟ ಮಾಡುವ ಸಮಯದಲ್ಲಿ ಮೊಬೈಲ್, ಟಿ.ವಿ. ನೋಡುತ್ತಾ ಊಟದ ವಿಧಾನವನ್ನು ಮರೆಯಬಾರದು. ಪ್ರತಿಯೊಬ್ಬರು ಆರೋಗ್ಯವನ್ನು ಸ್ವಚ್ಛವಾಗಿರಿಸಿ ಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಧರ್ಮಸ್ಥಳ ಸಂಘದಿAದ ಮಹಿಳೆಯರು ಸೌಲಭ್ಯ ಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಿದ್ದಾರೆ. ಹೆಣ್ಣೊಂದು ಕಲಿತರೆ ಕುಟುಂಬವೇ ಕಲಿತಂತೆ. ಹೆಣ್ಣು ಸಮಾಜದ ಕಣ್ಣು ಎಂದು ಹೇಳಿದರು.
ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ ಮಾತನಾಡಿ, ಮನುಷ್ಯ ತನ್ನ ಆರೋಗ್ಯವನ್ನು ಕಾಪಾಡಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು ಎಂದರು.
ಅರುವತೋಕ್ಲು ಸರ್ವದೈವತಾ ಶಾಲೆಯ ಮುಖ್ಯ ಶಿಕ್ಷಕಿ ಮನೆಯಪಂಡ ಶೀಲಾ ಬೋಪಣ್ಣ ‘ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ಪೋಷಕರ ಪಾತ'್ರ ಎಂಬ ವಿಷಯದ ಬಗ್ಗೆ ಮಾತನಾಡಿದರು. ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ತಾಲೂಕು ಯೋಜನಾಧಿಕಾರಿ ಬಿ. ದಿನೇಶ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಆರ್. ಶ್ರೇಯಾ, ಯೋಜನೆಯ ಕೃಷಿ ಅಧಿಕಾರಿ ವಸಂತ, ವಲಯ ಮೇಲ್ವಿಚಾರಕ ಶಿವಕುಮಾರ್ ಉಪಸ್ಥಿತರಿದ್ದರು. ವಿಚಾರಗೋಷ್ಠಿಯಲ್ಲಿ ತಾಲೂಕಿನ ಮಹಿಳಾ ಜ್ಞಾನ ವಿಕಾಸ- ಸೇವಾಪ್ರತಿನಿಧಿಗಳು ಭಾಗವಹಿಸಿದ್ದರು.