ಸಂಭಾಲ್ ಮಸೀದಿ ಬಾವಿ ವಿವಾದ : ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ
ನವದೆಹಲಿ, ಜ. ೧೦: ಸಂಭಾಲ್‌ನ ಜಾಮಾ ಮಸೀದಿ ನಿರ್ವಹಣಾ ಸಮಿತಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿ, ಮಸೀದಿಯ ಪ್ರವೇಶದ್ವಾರದ ಬಳಿ ಇರುವ ಖಾಸಗಿ ಬಾವಿಗೆ ಸಂಬAಧಿಸಿದAತೆ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಆದೇಶ ನೀಡಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು ಬಾವಿಗೆ ಸಂಬAಧಿಸಿದAತೆ ನ್ಯಾಯಾಲಯದ ಅನುಮತಿಯಿಲ್ಲದೆ ಯಾವುದೇ ಕ್ರಮಗಳನ್ನು ತೆಗೆದು ಕೊಳ್ಳಬಾರದು ಮತ್ತು ಇನ್ನೆರಡು ವಾರಗಳಲ್ಲಿ ಸ್ಥಿತಿ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿತು. ಶಾಹಿ ಜಾಮಾ ಮಸೀದಿಯ ನಿರ್ವಹಣಾ ಸಮಿತಿಯು ಸಲ್ಲಿಸಿದ ಅರ್ಜಿಯಲ್ಲಿ ಮಸೀದಿಯ ಸಮೀಕ್ಷೆಗೆ ವಕೀಲ ಆಯುಕ್ತರನ್ನು ನೇಮಿಸಲು ಅನುಮತಿ ನೀಡಿದ ಸಂಭಾಲ್ ಹಿರಿಯ ವಿಭಾಗ ಸಿವಿಲ್ ನ್ಯಾಯಾಧೀಶರ ನವೆಂಬರ್ ೧೯, ೨೦೨೪ ರ ಆದೇಶವನ್ನು ಪ್ರಶ್ನಿಸಿತು. ನಿರ್ವಹಣಾ ಸಮಿತಿಯನ್ನು ಪ್ರತಿನಿಧಿಸುವ ಹಿರಿಯ ವಕೀಲ ಹುಜೆಫಾ ಅಹ್ಮದಿ, ಬಾವಿಯ ಐತಿಹಾಸಿಕ ಮಹತ್ವವನ್ನು ಒತ್ತಿ ಹೇಳಿದರು, ನಾವು ಅನಾದಿಕಾಲದಿಂದಲೂ ಬಾವಿಯಿಂದ ನೀರನ್ನು ಸೇದುತ್ತಿದ್ದೇವೆ. ಈ ಸ್ಥಳವನ್ನು "ಹರಿ ಮಂದಿರ" ಎಂದು ಉಲ್ಲೇಖಿಸುವ ಮತ್ತು ಅಲ್ಲಿ ಧಾರ್ಮಿಕ ಚಟುವಟಿಕೆ ಗಳನ್ನು ಪ್ರಾರಂಭಿಸುವ ಯೋಜನೆಗಳ ಬಗ್ಗೆ ಅಹ್ಮದಿ ಕಳವಳ ವ್ಯಕ್ತಪಡಿಸಿದರು. ಅಂತಹ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದಿಲ್ಲ. ದಯವಿಟ್ಟು ಸ್ಥಿತಿ ವರದಿಯನ್ನು ಸಲ್ಲಿಸಿ ಎಂದು ಸಿಜೆಐ ಹೇಳಿದರು.
ಒಂದೇ ಕುಟುಂಬದ ಐವರ ಶವ ಪತ್ತೆ
ಮೀರತ್, ಜ. ೧೦: ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಲಿಸಾರಿ ಗೇಟ್ ಪ್ರದೇಶದ ಸೊಹೈಲ್ ಗಾರ್ಡನ್ ನಲ್ಲಿರುವ ಮನೆಯಲ್ಲಿ ಒಂದೇ ಕುಟುಂಬದ ಐವರ ಶವ ಪತ್ತೆಯಾಗಿವೆ. ಒಬ್ಬ ಪುರುಷ, ಒಬ್ಬ ಮಹಿಳೆ ಮತ್ತು ಅವರ ಮೂವರು ಹೆಣ್ಣುಮಕ್ಕಳನ್ನು ಒಳಗೊಂಡ ಕುಟುಂಬವನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ, ಆದಾಗ್ಯೂ, ಅವರ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತರನ್ನು ಮೊಯಿನ್, ಅವರ ಪತ್ನಿ ಅಸ್ಮಾ, ಮೂವರು ಹೆಣ್ಣು ಮಕ್ಕಳಾದ ಅಫ್ಸಾ (೮), ಅಜೀಜಾ (೪) ಮತ್ತು ಅಡಿಬಾ (೧) ಎಂದು ಗುರುತಿಸಲಾಗಿದೆ. ಶವಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ಕಳುಹಿಸಲಾಗಿದೆ ಎಂದು ಅವರು ಹೇಳಿದರು. ಮನೆಗೆ ಹೊರಗಿನಿಂದ ಬೀಗ ಹಾಕಲಾಗಿದ್ದು ಛಾವಣಿ ಮೂಲಕ ಒಳಗೆ ಹೋಗಿ ನೋಡಿದಾಗ ಮೃತ ದೇಹಗಳು ಪತ್ತೆಯಾದವು. ಮೂರು ಮಕ್ಕಳ ಶವಗಳನ್ನು ಮಂಚದ ಬಾಕ್ಸ್ನಲ್ಲಿ ಇಡಲಾಗಿತ್ತು. ಮೊಹಿನ್ ಕಾಲುಗಳನ್ನು ಬೆಡ್‌ಶೀಟ್‌ನಿಂದ ಕಟ್ಟಲಾಗಿತ್ತು ಎಂದು ಹಿರಿಯ ಪೊಲೀಸ್ ಅಧೀಕ್ಷಕ ವಿಪಿನ್ ತಾಡ ತಿಳಿಸಿದ್ದಾರೆ.
ಅಕ್ರಮವಾಗಿ ನೆಲೆಸಿದ್ದ ಬಾಂಗ್ಲ ಪ್ರಜೆ ಬಂಧನ
ಮAಗಳೂರು, ಜ. ೧೦: ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯೊಬ್ಬನನ್ನು ಮಂಗಳೂರಿನ ಗ್ರಾಮವೊಂದರಲ್ಲಿ ಶುಕ್ರವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ೨೫ ವರ್ಷದ ಅನುರುಲ್ ಶೇಕ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಮುಕ್ಕ ಗ್ರಾಮದಲ್ಲಿ ಶೇಕ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ) ಮತ್ತು ಮಂಗಳೂರು ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಮೂರು ವರ್ಷಗಳ ಹಿಂದೆ ಲಾಲ್ಗೋಲ್ ಗಡಿ (ಪೂರ್ವ ಪಶ್ಚಿಮ ಬಂಗಾಳ) ಪ್ರದೇಶದಿಂದ ಅಕ್ರಮವಾಗಿ ಭಾರತಕ್ಕೆ ನುಸುಳಿದ್ದನು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಈಡೇರದ ಬೇಡಿಕೆ - ಮುಂದುವರೆದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಬೆಂಗಳೂರು, ಜ. ೧೦: ಮಾಸಿಕ ೧೫,೦೦೦ ರೂ.ಗಳ ನಿಗದಿತ ಗೌರವಧನ ಮತ್ತು ಇತರ ಸೌಲಭ್ಯಗಳ ನೀಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಶುಕ್ರವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಆರೋಗ್ಯ ಸೌಧದಲ್ಲಿ ಗುರುವಾರ ಮಧ್ಯಾಹ್ನ ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಚರ್ಚಿಸಲಾಗಿತ್ತು. ಒಂದೆಡೆ ಸಂಘಟನೆಯ ಸದಸ್ಯರು ಮತ್ತು ರಾಜ್ಯದ ಅಧಿಕಾರಿಗಳ ನಡುವೆ ಮಾತುಕತೆ ನಡೆಯತ್ತಿದ್ದರೂ, ಸರ್ಕಾರದ ಮನವಿಗೆ ಒಪ್ಪದ ಆಶಾ ಕಾರ್ಯಕರ್ತೆಯರು ಪಟ್ಟು ಬಿಡದೆ ಪ್ರತಿಭಟನೆ ಮುಂದುವರೆಸಿದ್ದಾರೆ.
ನಟ ದರ್ಶನ್, ಪವಿತ್ರಾ ಗೌಡ ಕೋರ್ಟ್ಗೆ ಹಾಜರು
ಬೆಂಗಳೂರು, ಜ. ೧೦: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಬೆಂಗಳೂರಿನ ಸಿಸಿಎಚ್ ೫೭ರ ಕೋರ್ಟ್ಗೆ ವಿಚಾರಣೆಗೆ ಹಾಜರಾದರು. ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಆರೋಪಿಗಳು ಕೋರ್ಟ್ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಹಾಗಾಗಿ ಇಂದು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಮೊದಲೇ ಬಂದಿದ್ದ ಪವಿತ್ರಾ ಗೌಡ, ತಮ್ಮ ವಕೀಲರೊಂದಿಗೆ ಕೋರ್ಟ್ ಆವರಣದಲ್ಲಿ ಚರ್ಚಿಸುತ್ತಾ ನಿಂತಿದ್ದರು. ಇತರೆ ಆರೋಪಿಗಳು ಸಹ ತಮ್ಮ ತಮ್ಮ ವಕೀಲರೊಡನೆ ಕೋರ್ಟ್ಗೆ ಹಾಜರಾಗಿದ್ದರು. ದರ್ಶನ್, ನಟ ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಆಗಮಿಸಿದರು. ಅವರೊಟ್ಟಿಗೆ ವಕೀಲರು ಸಹ ಇದ್ದರು. ದರ್ಶನ್, ನ್ಯಾಯಾಲಯದ ಬಳಿ ಬಂದಾಗ ಜನ ಮತ್ತು ಮಾಧ್ಯಮಗಳು ಸುತ್ತುವರೆದರು. ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ಬಳಿಕ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ ೨೫ಕ್ಕೆ ಮುಂದೂಡಿ ಆದೇಶಿಸಿದರು.
ಮಹಿಳಾ ಮೀಸಲಾತಿ ಕಾಯ್ದೆ ವಿರುದ್ಧದ ಅರ್ಜಿ ವಿಚಾರಣೆಗೆ ನಕಾರ
ನವದೆಹಲಿ, ಜ. ೧೦: ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಮೀಸಲಾತಿ ಕಲ್ಪಿಸುವ ೨೦೨೩ರ ನಾರಿ ಶಕ್ತಿ ವಂದನಾ ಕಾಯ್ದೆಯಲ್ಲಿ ಬರುವ ಮರು ಹಂಚಿಕಾ ನಿಯಮದ ಕುರಿತಂತೆ ಪರಿಶೀಲನೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಸಂವಿಧಾನದ ಪರಿಚ್ಛೇದ ೩೨ರ ಅಡಿ ಭಾರತೀಯ ಮಹಿಳೆಯರ ರಾಷ್ಟಿçÃಯ ಒಕ್ಕೂಟ (ಎನ್‌ಎಫ್‌ಐಡಬ್ಲ್ಯು) ಮತ್ತು ಜಯಾ ಠಾಕೂರ್ ಸಲ್ಲಿಸಿದ್ದ ಮನವಿಗಳ ವಿಚಾರಣೆಗೆ ನ್ಯಾಯ ಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಿ.ಬಿ. ವರಾಳೆ ನೇತೃತ್ವದ ಪೀಠ ನಿರಾಕರಿಸಿದೆ. ಜಯಾ ಠಾಕೂರ್ ಅವರು ಕಾಯ್ದೆಯ ಜಾರಿಯನ್ನೇ ಪ್ರಶ್ನಿಸಿದ್ದರೆ, ಎನ್‌ಎಫ್‌ಐಡಬ್ಲ್ಯು, ಕಾಯ್ದೆಯ ಮರುಹಂಚಿಕೆಯ ನಿಯಮಗಳನ್ನು ಪ್ರಶ್ನಿಸಿತ್ತು. ಠಾಕೂರ್ ಅವರ ಮನವಿಯನ್ನು ನಿರುಪಯುಕ್ತವೆಂದು ತಳ್ಳಿಹಾಕಿದ ನ್ಯಾಯಾಲಯವು, ಪರಿಚ್ಛೇದ ೩೨ರ ಅಡಿಯಲ್ಲಿ ಎನ್‌ಎಫ್‌ಐಡಬ್ಲ್ಯು ಮನವಿಯನ್ನು ಪರಿಶೀಲಿಸಲು ಒಲವು ತೋರಲಿಲ್ಲ.
ಕೇಜ್ರಿವಾಲ್ ನಿವಾಸ ಎದುರು ಬಿಜೆಪಿ ಪ್ರತಿಭಟನೆ
ನವದೆಹಲಿ, ಜ. ೧೦: ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ನೋಂದಣಿ ಕುರಿತು ಎಎಪಿ ಸಂಚಾಲಕ ಅರವಿಂದ ಕೇಜ್ರ‍್ರಿವಾಲ್ ಅವರು ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿ ದೆಹಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೇಜ್ರಿವಾಲ್ ಅವರ ನಿವಾಸದ ಎದುರು ನೂರಾರು ಬಿಜೆಪಿ ಪ್ರತಿಭಟನಾಕಾರರು ಜಮಾಯಿಸಿದ್ದು, ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ದಾಟಲು ಯತ್ನಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಜಲಫಿರಂಗಿಗಳನ್ನು ಪ್ರಯೋಗಿಸಿದ್ದಾರೆ. ದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯನ್ನು ಬಿಜೆಪಿ ದುರ್ಬಳಕೆ ಮಾಡಿಕೊಂಡಿದೆ. ಡಿಸೆಂಬರ್ ೧೫ ರಿಂದ ಜನವರಿ ೮ರ ನಡುವೆ ಸುಮಾರು ೧೩,೦೦೦ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲು ಅರ್ಜಿ ಸಲ್ಲಿಸಲಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ದೂರು ಸಲ್ಲಿಸಿದ್ದರು.