ಗೋಣಿಕೊಪ್ಪಲು, ಜ.೧೦: ಜಿಲ್ಲೆಗೆ ಆಗಮಿಸಿದ ರಾಜ್ಯದ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅದ್ದೂರಿಯಾಗಿ ಬರ ಮಾಡಿಕೊಳ್ಳಲಾಯಿತು.
ಸಚಿವರ ಆಗಮನದ ಹಿನ್ನೆಲೆ ಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೊಡಗಿನ ಗಡಿ ತಿತಿಮತಿ ಸಮೀಪದ ಆನೆ ಚೌಕೂರು ಗೇಟ್ ಬಳಿ ಸೇರಿದ್ದರು.
ಮಧ್ಯಾಹ್ನ ೨ ಗಂಟೆಯ ವೇಳೆ ಸಚಿವರು ಕೊಡಗಿಗೆ ಆಗಮಿಸಿದರು. ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಸಚಿವರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಬರಮಾಡಿಕೊಂಡರು.
`ಶಕ್ತಿ'ಯೊAದಿಗೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕೊಡಗು ಜಿಲ್ಲೆಗೆ ಸಚಿವನಾದ ನಂತರ ಮೊದಲ ಬಾರಿಗೆ ಆಗಮಿಸಿದ್ದೇನೆ. ಈಗಾಗಲೇ ಕೊಡಗಿನ ರಸ್ತೆ ಅಭಿವೃದ್ಧಿಗೆ ಬೇಕಾದ ಅನುದಾನ ಬಿಡುಗಡೆ ಮಾಡಲಾಗಿದೆ. ಅಗತ್ಯ ಬಿದ್ದರೆ ಮತ್ತಷ್ಟು ಅನುದಾನ ನೀಡುತ್ತೇನೆ. ಅನುದಾನಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಹಿಂದುಳಿದ ವರ್ಗಗಳ ಘಟಕ ಅಧ್ಯಕ್ಷ ಬಿ.ಎನ್. ಪೃಥ್ಯು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕೋಳೆರ ಭಾರತಿ, ಸೇವಾದಳದ ಪ್ರಮುಖರಾದ ತೆರಸ ವಿಕ್ಟರ್, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಹೆಚ್.ಬಿ. ಗಣೇಶ್, ಕುಲ್ಲಚಂಡ ಪ್ರಮೋದ್ ಗಣಪತಿ, ಮತ್ರಂಡ ದಿಲ್ಲು, ಎ.ಜೆ.ಬಾಬು, ಪಿ.ಆರ್. ಪಂಕಜ, ಅಪ್ಪಚ್ಚಂಗಡ ಮೋಟಯ್ಯ, ವಿಲ್ಸನ್, ಆಲೀರ ರಶೀದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.