ಕೂಡಿಗೆ, ಜ. ೧೦: ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘದ ಮುಂಭಾಗದಲ್ಲಿ ನೂತನವಾಗಿ ಒಳಚರಂಡಿ ವ್ಯವಸ್ಥೆಯ ಕಾಮಗಾರಿಯನ್ನು ಕೈಗೊಳ್ಳುವಂತೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರಿಗೆ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ಮತ್ತು ಸಂಘದ ಸದಸ್ಯರು ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಶಾಸಕ ಮಂತರ್ ಗೌಡ ಅವರು ಸಭಾಂಗಣದ ಮುಂಭಾಗದಲ್ಲಿ ಸ್ಥಳ ವೀಕ್ಷಣೆ ಮಾಡಿ ಪ್ರಮುಖವಾಗಿ ವಾಹನಗಳ ದಟ್ಟಣೆ ಇರುವ ಸ್ಥಳವಾಗಿರುವ ಕೂಡಿಗೆ ಸಮೀಪದ ಹಾರಂಗಿ ನದಿ ಸೇತುವೆಯ ಸಮೀಪದಿಂದ ಡೈರಿ ಸರ್ಕಲ್‌ವರೆಗೆ ವಾಹನಗಳ ನಿಲುಗಡೆಗೆ ಸುಸಜ್ಜಿತವಾದ ವ್ಯವಸ್ಥೆಯನ್ನು ಕಲ್ಪಿಸುವ ಭರವಸೆ ಜೊತೆಯಲ್ಲಿ ಅದಕ್ಕೆ ಸಂಬAಧಿಸಿದ ಇಲಾಖೆಯ ಮೂಲಕ ಕ್ರಿಯಾ ಯೋಜನೆ ತಯಾರಿಸಿ ಕಾಮಗಾರಿಯನ್ನು ಕೈಗೊಳ್ಳುವ ಭರವಸೆಯನ್ನು ನೀಡಿದರು. ಈ ಸಂದರ್ಭ ರಾಜ್ಯ ಕಾಂಗ್ರೆಸ್ ಸಮಿತಿ ಸದಸ್ಯ ಮಂಜುನಾಥ ಗುಂಡೂರಾವ್, ಕುಶಾಲನಗರ ಕುಡ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್, ಸಹಕಾರ ಸಂಘದ ಮಾಜಿ ನಿರ್ದೇಶಕ ಕೆ.ಕೆ. ನಾಗರಾಜಶೆಟ್ಟ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ. ಮೀನಾ, ಸಂಘದ ಸದಸ್ಯರಾದ ಮಧುಕುಮಾರ್, ಕೂಡುಮಂಗಳೂರು ರಾಜು, ರಘು, ನೀರು ಬಳಕೆದಾರ ಮಹಾ ಮಂಡಲದ ನಿರ್ದೇಶಕಿ ಉಮಾ ಪ್ರಭಾಕರ್ ಮತ್ತಿತರರು ಹಾಜರಿದ್ದರು.