ಮಡಿಕೇರಿ, ಜ. ೨೭: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇಂದು ಬೆಳಿಗ್ಗೆ ೧೦.೩೦ ಗಂಟೆಯಿAದ ಮಧ್ಯಾಹ್ನ ೩ ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ತಾಮರ ರೆಸಾರ್ಟ್, ಕಕ್ಕಬ್ಬೆ, ಪೆಂಟಾಟೆಕ್, ಮಡಿಕೇರಿ, ಕಲ್ಯಾಣಿ ಮೋಟರ್ಸ್, ಮಡಿಕೇರಿ, ಮುತ್ತೂಟ್ ಫೈನಾನ್ಸ್, ಮೈಸೂರು, ಇಬ್ಬನಿ ರೆಸಾರ್ಟ್, ಮಡಿಕೇರಿ, ಅಪೋಲೋ ಫಾರ್ಮಸಿ ಬೆಂಗಳೂರು, ಹ್ಯೂಂಡಾಯಿ ಕಾರ್ ಶೋ ರೂಮ್ಸ್, ಮಡಿಕೇರಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್ಸಿ ಕ್ಕಿಂತ ಕಡಿಮೆ, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ಸ್ವಯಂ ವಿವರ(ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ. ಮಂಜುನಾಥ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಈ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ ೮೨೯೬೦೨೦೮೨೬ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಸಿ.ಬಿ. ಮಂಜುನಾಥ ಅವರು ತಿಳಿಸಿದ್ದಾರೆ.