ಮಡಿಕೇರಿ, ಜ. ೨೭: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರಿಗೆ ಶಸ್ತç ಕ್ಯಾರ‍್ಯಾಕ್ಟ್ ಚಿಕಿತ್ಸೆ ಪ್ರಯುಕ್ತ ಕಣ್ಣಿನ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.

ಶಿಬಿರದ ಉದ್ಘಾಟನೆಯನ್ನು ಡಾ. ಎ.ಜೆ. ಲೋಕೇಶ್ ನಿರ್ದೇಶಕರು ವೈದ್ಯಕೀಯ ಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ, ಮಡಿಕೇರಿ ಇವರು ನೆರವೇರಿಸಿ ಹಿರಿಯ ನಾಗರಿಕರಿಗೆ ಹಾಗೂ ಸಾರ್ವಜನಿಕರಿಗೆ ಸಂಬAಧಿಸಿದAತೆ ಕಣ್ಣಿನ ಆರೋಗ್ಯದ ಕುರಿತು ಹಾಗೂ ಆರೋಗ್ಯ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಶಸ್ತç ಚಿಕಿತ್ಸೆಕರಾದ ಡಾ.ನಂಜುAಡಯ್ಯ ಮಾತನಾಡಿ, ಪ್ರತಿ ಗ್ರಾಮ ಮಟ್ಟದಲ್ಲಿ ಇಲಾಖೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಇದರಲ್ಲಿ ವಿಶೇಷ ಚೇತನಿಗೆ ಸಂಬAಧಿಸಿದAತೆ ಕಾರ್ಡ್ನ್ನು ನೀಡುವ ಮೂಲಕ ಪ್ರತಿಯೊಬ್ಬರಿಗೂ ಇಲಾಖೆಯ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಸದರಿ ಶಿಬಿರದ ಉಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕಾಗಿ ತಿಳಿಸಿದರು.

ನಂತರ ಕಣ್ಣಿನ ವಿಭಾಗದ ಮುಖ್ಯಸ್ಥರಾದ ಕೃಪಾಲಿನಿ ಅಪ್ಪಯ್ಯ ಅವರು ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಕಣ್ಣಿಗೆ ಸಂಬAಧಿಸಿದAತೆ ಯಾವುದೇ ಸಣ್ಣ ಸಮಸ್ಯೆ ಇದ್ದರೂ ಕೂಡ ಪರೀಕ್ಷೆಗೆ ಒಳಪಡಿಸಿ ಸರಿಯಾದ ಚಿಕಿತ್ಸೆ ಪಡೆದಲ್ಲಿ ಕಣ್ಣು ಉತ್ತಮವಾಗಿ ಕೆಲಸ ನಿರ್ವಹಿಸಬಹುದು ಹಾಗೂ ಇಲಾಖೆಯಿಂದ ಉಚಿತ ಕನ್ನಡಕ ಹಾಗೂ ಶಸ್ತ್ರ ಚಿಕಿತ್ಸೆಯ ಕಾರ್ಯಕ್ರಮ ಇದ್ದು ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಕಣ್ಣಿನ ವೈದ್ಯಾಧಿಕಾರಿಯಾದ ಡಾಕ್ಟರ್ ವಿಕ್ರಂ ಹಾಗೂ ಕಿವಿ ಮೂಗು ವೈದ್ಯಾಧಿಕಾರಿಯಾದ ರಾಘವೇಂದ್ರ, ಮನೋ ವೈದ್ಯರಾದ ಡಾ. ರಮೇಶ್ ವೈದ್ಯಕೀಯ ವಿದ್ಯಾರ್ಥಿಗಳು, ಹಿರಿಯ ನಾಗರಿಕರೂ, ಹಿರಿಯ ನಾಗರಿಕರ ಸಹಾಯವಾಣಿಯ ಮತ್ತು ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು. ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ವಿಮಲಾ ಸ್ವಾಗತಿಸಿದರು.