ಮಡಿಕೇರಿ, ಜ. ೨೮: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ೨೦೨೪-೨೫ ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಇಂಟರ್‌ನ್‌ಶಿಪ್ ಪ್ರೋಗ್ರಾಂ(ಇಪಿ) ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರವಾಸಿ ತಾಣದಲ್ಲಿ ಮೊಬೈಲ್ ಕ್ಯಾಂಟೀನ್ ವಾಹನವನ್ನು ಖರೀದಿಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದೆ.
ಈ ತರಬೇತಿ ಹಾಗೂ ಸಹಾಯಧನಕ್ಕಾಗಿ ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ೨ ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ೧ ಅಭ್ಯರ್ಥಿಗಳ ಗುರಿಯನ್ನು ಪ್ರಸ್ತುತ ಸಾಲಿನಲ್ಲಿ ನಿಗಧಿಪಡಿಸಿದೆ. ಈ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮ ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ.
ಈ ತರಬೇತಿ ಕಾರ್ಯಕ್ರಮಗಳ ವಿವರ/ ಅಭ್ಯರ್ಥಿಗಳ ವಿದ್ಯಾರ್ಹತೆಯ ವಿವರ ಇಂತಿದೆ. ಇಂಟರ್‌ಪ್ರೆನರ್‌ಶಿಪ್ ಪ್ರೋಗ್ರಾಮ್ (ಇಪಿ) ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಕನಿಷ್ಠ ವಿದ್ಯಾರ್ಹತೆ ೧೦ ನೇ ತರಗತಿ, ತರಬೇತಿ ಅವಧಿ ೧ ತಿಂಗಳು, ೨೦ ರಿಂದ ೪೫ ವರ್ಷದೊಳಗಿರಬೇಕು. ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ ೨, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಗುರಿ ೧ ಆಗಿದೆ.
ಈ ತರಬೇತಿಯನ್ನು ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜನವರಿ, ೩೧ ರವರೆಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿಯಲ್ಲಿ ಅರ್ಜಿ ಪಡೆಯಬಹುದು.
ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಗಳಲ್ಲಿ ಜನವರಿ ೩೧ ರ ಸಂಜೆ ೫ ಗಂಟೆಯೊಳಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿಗೆ ಸಲ್ಲಿಸಲು ತಿಳಿಸಿದೆ.
ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ೫೭೧೨೦೧ ದೂರವಾಣಿ ಸಂಖ್ಯೆ ೦೮೨೭೨-೨೦೦೫೧೯ ಅಥವಾ ಈ-ಮೇಲ್ ಜಜಞoಜಚಿguಣouಡಿism@gmಚಿiಟ.ಛಿom ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ತಿಳಿಸಿದ್ದಾರೆ.