ಚೆಯ್ಯಂಡಾಣೆ, ಜ. ೨೮: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇಲಾವರ ಗ್ರಾಮದಲ್ಲಿ ಕಾಡಾನೆಯೊಂದು ವಿದ್ಯುತ್ ಕಂಬವನ್ನು ಉರುಳಿಸಿದ ಘಟನೆ ಕಳೆದ ರಾತ್ರಿ ನಡೆದಿದೆ.
ಚೇಲಾವರ ಗ್ರಾಮದ ಮನೆಯಪಂಡ ಧೀರಜ್ ತಿಮ್ಮಯ್ಯ ಅವರ ಮನೆಯ ಸಮೀಪವಿರುವ ಕೆರೆಯ ಬದಿಯಲ್ಲಿ ಕಂಬವನ್ನು ಕಾಡಾನೆ ಹಾನಿಪಡಿಸಿದೆ. ನಂತರ ಸಮೀಪವಿರುವ ತೋಟಕ್ಕೆ ನುಗ್ಗಿ ಕಾಫಿ, ಅಡಿಕೆ, ಬಾಳೆಗಿಡಗಳನ್ನು ತುಳಿದು ನಾಶಪಡಿಸಿದೆ.
ಈ ವ್ಯಾಪ್ತಿಯಲ್ಲಿ ನಿರಂತರ ಕಾಡಾನೆ ಹಾವಳಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದರೂ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಾನೆ ತೋಟಗಳಿಗೆ ನುಸುಳದ ರೀತಿಯಲ್ಲಿ ಹಾಗೂ ಈ ವ್ಯಾಪ್ತಿಯಲ್ಲಿ ಇರುವ ಆನೆಗಳನ್ನು ಸೆರೆಹಿಡಿಯಬೇಕೆಂದು ಆಗ್ರಹಿಸಿದ್ದಾರೆ.