ಸಿದ್ದಾಪುರ, ಫೆ. ೧: ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ನೆಲ್ಲಿಹುದಿಕೇರಿಯ ಕೆಪಿಎಸ್ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದರು.

ನೆಲ್ಲಿಹುದಿಕೇರಿ ಕೆಪಿಎಸ್ ಶಾಲೆಯು ಯಾವುದೇ ಖಾಸಗಿ ಶಾಲೆಗೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದಿದೆ. ಇದೀಗ ರೂ. ೨ ಕೋಟಿ ವೆಚ್ಚದಲ್ಲಿ ೧೧ ಕೊಠಡಿಗಳನ್ನೊಳಗೊಂಡ ನೂತನ ಸುಸಜ್ಜಿತ ಕಟ್ಟಡ ಉದ್ಘಾಟನೆಗೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಅವಕಾಶ ಮಾಡಲಾಗಿದೆ. ಇತ್ತೀಚೆಗೆ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿರುವ ನಡುವೆ ನೆಲ್ಲಿಹುದಿಕೇರಿ ಕೆಪಿಎಸ್ ಶಾಲೆಯಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಹೊಂದಿರುವುದು ವಿಶೇಷವಾಗಿದೆ. ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಹೆಚ್ಚಳವಾಗುತ್ತಿದ್ದಂತೆ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು. ಈ ನಿಟ್ಟಿನಲ್ಲಿ ಸಿಬ್ಬಂದಿಗಳ ಕೊರತೆಯಾಗದಂತೆ ಎಚ್ಚರವಹಿಸಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಪೋಷಕರು ವಿದ್ಯಾರ್ಥಿಗಳ ಮೇಲೆ ಹೆಚ್ಚು ಒತ್ತಡ ಹಾಕಬಾರದು ಬದಲಿಗೆ ಕಲಿಕೆಯೊಂದಿಗೆ ಕಲೆ, ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸುವ ಮೂಲಕ ಸಾಧನೆಗೆ ಅವಕಾಶ ಮಾಡಿಕೊಡಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಸಂತಕುಮಾರ್ ಮಾತನಾಡಿದರು. ಈ ಸಂದರ್ಭ ಪ್ರೌಢ ಶಾಲಾ ವಿಭಾಗದ ಫುಟ್‌ಬಾಲ್ ಪಂದ್ಯಾಟದಲ್ಲಿ ರಾಷ್ಟçಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನಂತರ ಪ್ರಾಥಮಿಕ, ಪ್ರೌಢಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಭೋಜನ ಕೂಟವನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭ ಕೆಪಿಎಸ್ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮುಸ್ತಫಾ ಪಿ.ಕೆ., ಗ್ರಾ.ಪಂ. ಅಧ್ಯಕ್ಷೆ ದಮಯಂತಿ, ಪಿಡಿಓ ನಂಜುAಡಸ್ವಾಮಿ, ಸದಸ್ಯರುಗಳಾದ ಹಕೀಂ, ಹನೀಫ, ಅಫ್ಸಲ್, ಸುಜಾತ, ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಸದಸ್ಯ ಶಶಿಧರ್, ಕೆಡಿಪಿ ಸದಸ್ಯೆ ಸುನಿತಾ ಮಂಜುನಾಥ್, ಬಿಇಒ ಭಾಗ್ಯ, ಪ್ರಾಂಶುಪಾಲರಾದ ಆಲ್ವರೀಸ್, ಉಪಪ್ರಾಂಶುಪಾಲ ಅನಿಲ್, ಮುಖ್ಯೋಪಾಧ್ಯಾಯಿನಿ ಭಾರತಿ, ಡಿ.ಸಿ.ಸಿ. ಸದಸ್ಯ ಕೆ.ಎಂ. ಬಶೀರ್ ಹಾಗೂ ಯುವ ಕಾಂಗ್ರೆಸ್ ಉಪಾಧ್ಯಕ್ಷ ಷಂಶುದ್ದೀನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್, ನಾರಾಯಣ ಇನ್ನಿತರರು ಹಾಜರಿದ್ದರು.