ಮಡಿಕೇರಿ, ಫೆ. ೧: ಸಂವಿಧಾನಿಕ ಹಕ್ಕು ಮತ್ತು ಸಂಸ್ಕೃತಿಯ ಭದ್ರತೆಗಾಗಿ, ಮತ್ತು ಜನಾಂಗೀಯ ಅಸ್ತಿತ್ವವನ್ನು ಕಾಪಾಡುವ ನಿಟ್ಟಿನಲ್ಲಿ, ಎಲ್ಲಾ ಕೊಡವ ಸಮಾಜ, ಭಾಷಿಕ ಸಮುದಾಯಗಳ ಸಂಘಟನೆಗಳು ಸೇರಿದಂತೆ ಎಲ್ಲಾ ಕೊಡವ ಸಂಘ,ಕೊಡವ ಅಭಿಮಾನಿಗಳು ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕುಟ್ಟದಿಂದ ಮಡಿಕೇರಿಗೆ ಬೃಹತ್ ಪಾದಯಾತ್ರೆ ನಡೆಸುವ ಮೂಲಕ ನಮ್ಮ ಹಕ್ಕು ಪ್ರತಿಪಾದನೆ ಮಾಡುವ ಕುರಿತಂತೆ ಅಖಿಲ ಕೊಡವ ಸಮಾಜ ಕೊಡವ ಭಾಷೆ ಮಾತನಾಡುವ ಎಲ್ಲಾ ಜನಾಂಗದವರನ್ನು ಒಂದೇ ವೇದಿಕೆಯಡಿ ತರಲು ತೀರ್ಮಾನಿಸಿದ ಹಿನ್ನೆಲೆಯಲ್ಲಿ ಕುಟ್ಟದಿಂದ ಮಡಿಕೇರಿಯ ವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆಗೆ ಕೊಡಗು ಹೆಗ್ಗಡೆ ಸಮಾಜ ಬೆಂಬಲ ಸೂಚಿಸಿದೆ. ಈ ಬಗ್ಗೆ ಅಧ್ಯಕ್ಷ ಪಡಿಞರಂಡ ಅಯ್ಯಪ್ಪ ಹೇಳಿಕೆ ನೀಡಿದ್ದಾರೆ.