ಸುಂಟಿಕೊಪ್ಪ, ಫೆ. ೨: ಪ್ರತಿಯೊಬ್ಬ ವ್ಯಕ್ತಿಯೂ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಇದರಿಂದ ವ್ಯಕ್ತಿಯ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಈ ದಿಸೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಪುಸ್ತಕಗಳನ್ನು ಓದುವ ಹವ್ಯಾಸ ಮಾಡುವ ನಿಟ್ಟಿನಲ್ಲಿ ಯೋಜನೆಯ ವತಿಯಿಂದ ಓದಿ ವಿಮರ್ಶೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜ್ಞಾನವಿಕಾಸ ಕೇಂದ್ರದ ಸಮನ್ವಯಾ ಧಿಕಾರಿ ಮಾಲಿನಿ ಹೇಳಿದರು.
ಮಂಜಿಕೇರೆ ಸಮುದಾಯ ಭವನದಲ್ಲಿ ಕಾನ್‌ಬೈಲ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದ ಕಾನ್‌ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಆಯೋಜಿಸಲಾಗಿದ್ದ ಪುಸ್ತಕ ವಾಚನ ಓದಿ ವಿಮರ್ಶೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮಾಲಿನಿ ಅವರು ಇಂದಿನ ದಿನಗಳಲ್ಲಿ ನಾವುಗಳು ಪುಸ್ತಕಗಳನ್ನು ಓದುವ ಹವ್ಯಾಸದಿಂದ ದೂರ ಉಳಿದುಕೊಳ್ಳುತ್ತಿದ್ದೇವೆ ಇದರಿಂದ ನಮ್ಮ ಜ್ಞಾನವು ಕುಂಠಿತಗೊಳ್ಳುತ್ತಿದೆ. ನಾವು ನಿತ್ಯ ಪುಸ್ತಕಗಳನ್ನು ವಾಚಿಸುವುದ್ದರಿಂದ ಜ್ಞಾನವನ್ನು ಬೆಳೆಸಿಕೊಳ್ಳಬಹುದಾಗಿದೆ. ವಿಶ್ರಾಂತಿ ಸಮಯದಲ್ಲಿ ಪುಸ್ತಕಗಳನ್ನು ವಾಚಿಸುವ ಆಭ್ಯಾಸವನ್ನು ರೂಢಿಸಿಕೊಳ್ಳುವಂತೆ ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಜನನಿ ತಂಡದ ಸದಸ್ಯೆ ರತ್ನ ವಹಿಸಿದ್ದರು. ಸ್ಥಳದಲ್ಲಿ ನೆರೆದಿದ್ದ ಸದಸ್ಯರಿಗೆ ಪುಸ್ತಕಗಳನ್ನು ವಿತರಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮಾಲಿನಿ ಅವರು ಇಂದಿನ ದಿನಗಳಲ್ಲಿ ನಾವುಗಳು ಪುಸ್ತಕಗಳನ್ನು ಓದುವ ಹವ್ಯಾಸದಿಂದ ದೂರ ಉಳಿದುಕೊಳ್ಳುತ್ತಿದ್ದೇವೆ ಇದರಿಂದ ನಮ್ಮ ಜ್ಞಾನವು ಕುಂಠಿತಗೊಳ್ಳುತ್ತಿದೆ. ನಾವು ನಿತ್ಯ ಪುಸ್ತಕಗಳನ್ನು ವಾಚಿಸುವುದ್ದರಿಂದ ಜ್ಞಾನವನ್ನು ಬೆಳೆಸಿಕೊಳ್ಳಬಹುದಾಗಿದೆ. ವಿಶ್ರಾಂತಿ ಸಮಯದಲ್ಲಿ ಪುಸ್ತಕಗಳನ್ನು ವಾಚಿಸುವ ಆಭ್ಯಾಸವನ್ನು ರೂಢಿಸಿಕೊಳ್ಳುವಂತೆ ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಜನನಿ ತಂಡದ ಸದಸ್ಯೆ ರತ್ನ ವಹಿಸಿದ್ದರು. ಸ್ಥಳದಲ್ಲಿ ನೆರೆದಿದ್ದ ಸದಸ್ಯರಿಗೆ ಪುಸ್ತಕಗಳನ್ನು ವಿತರಿಸಿ ವಾಚಿಸಲಾಯಿತು. ಪುಸ್ತಕದಲ್ಲಿ ವಾಚಿಸಿದ ವಾಕ್ಯಗಳನ್ನು ಆರಿಸಿ ಕೊಂಡು ವಿಮರ್ಶೆಯನ್ನು ಮಾಡಿಸುವ ಮೂಲಕ ವಿಜೇತರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಕಾನ್‌ಬೈಲ್ ವ್ಯಾಪ್ತಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳಾದ ಜನನಿ, ಭೂಮಿಕ, ಕನ್ನಿಕ, ಭಗವತಿ ಹಾಗೂ ದೃತಿ ಸಂಘದ ಸದಸ್ಯರುಗಳು ಪಾಲ್ಗೊಂಡಿದ್ದರು. ಅಶ್ವಿನಿ ಸ್ವಾಗತಿಸಿ, ಕಾವ್ಯ ವಂದಿಸಿದರು. ಈ ಸಂದರ್ಭ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ಖತೀಜಾ ಕಾನ್‌ಬೈಲ್ ವ್ಯಾಪ್ತಿಯ ಸೇವಾ ಪ್ರತಿನಿಧಿ ಯಶೋಧ ಬಸವರಾಜ್, ಮತ್ತಿತರರು ಇದ್ದರು.