ಗೋಣಿಕೊಪ್ಪಲು, ಫೆ.೨: ಪ್ರತಿ ಮಗುವಿಗೂ ಪ್ರಾಥಮಿಕ ಶಿಕ್ಷಣ ಲಭಿಸಲೇ ಬೇಕು, ಪ್ರಾಥಮಿಕ ಶಿಕ್ಷಣ ಮೂಲಭೂತ ಹಕ್ಕು, ಶಿಕ್ಷಣ ಕೊಡಿಸುವುದು ಪೋಷಕರ ಜವಾಬ್ದಾರಿ ಎಂದು ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಹೇಳಿದರು.

ಗೋಣಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ.ಹಿ.ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪೊನ್ನಣ್ಣ, ಶಿಕ್ಷಣದಿಂದ ಯಾರೂ ವಂಚಿತ ರಾಗದಂತೆ ಸರ್ಕಾರ ಕಾನೂನು ಜಾರಿಗೊಳಿಸಿದೆ. ಸರ್ಕಾರಿ ಶಾಲೆಯಲ್ಲಿ ಓದುವುದು ಕೀಳರಿಮೆಯಲ್ಲ, ಸರ್ಕಾರಿ ಶಾಲೆಯಲ್ಲಿ ಓದಿದ ಅದೇಷ್ಟೊ ಮಂದಿ ಉತ್ತಮ ಸ್ಥಾನ ಪಡೆದಿದ್ದಾರೆ. ಗೋಣಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಓದಿದ ಸಾವಿರಾರು ಮಂದಿ ತಮ್ಮದೇ ಆದ ಕೊಡುಗೆಯನ್ನು ಸಮಾಜಕ್ಕೆ ನೀಡಿದೆ ಎಂದು ನುಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿ ಶಾಲೆಯ ವತಿಯಿಂದ ಸನ್ಮಾನ ಸ್ವೀಕರಿಸಿದ ಮಾಜಿ ವಿಧಾನ ಪರಿಷತ್ ಸದಸ್ಯÀ ಚೆಪ್ಪುಡೀರ ಅರುಣ್ ಮಾಚಯ್ಯ ಮಾತನಾಡಿ, ೩ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಗೋಣಿಕೊಪ್ಪ ಸರ್ಕಾರಿ ಶಾಲೆಯು ತನ್ನದೇ ಆದ ವೈಶಿಷ್ಟ್ಯ ಹೊಂದಿದೆ. ನಿರೀಕ್ಷೆಗೂ ಮೀರಿ ಇಲ್ಲಿನ ವಿದ್ಯಾರ್ಥಿಗಳು ದೇಶದ ಉದ್ದಗಲಕ್ಕೂ ಸಾಧನೆ ಮಾಡಿದ್ದಾರೆ. ಶತಮಾನೋತ್ಸವ ಸಂದರ್ಭದಲ್ಲಿ ಎಲ್ಲರನ್ನೂ ಒಗ್ಗೂಡಿಸುವ ಪ್ರಯತ್ನ ಮಾಡಿರುವುದು ಶ್ಲಾಘನೀಯ. ಶತಮಾನೋತ್ಸವದ ಆಚರಣೆಯಿಂದ ಶಾಲೆಯ ಪ್ರಗತಿ ಹಾಗೂ ಅಭಿವೃದ್ಧಿಯೂ ಕೂಡ ನಡೆಯುತ್ತವೆ. ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಲಭಿಸುವುದರಿಂದ ಅವರ ಜೀವನದಲ್ಲಿ ಬದಲಾವಣೆ ಸಾಧ್ಯ ಎಂದು ಹೇಳಿದರು. ಶತಮಾನೋತ್ಸವ ಅಂಗವಾಗಿ ಸ್ಥಳ ದಾನಿಗಳು, ನಿವೃತ್ತ ಮುಖ್ಯೋಪಾಧ್ಯಾಯರು, ಶಿಕ್ಷಕರು, ಪ್ರಸ್ತುತ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಭೆಯಲ್ಲಿ ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಎಂ.ಜಿ.ಮೋಹನ್, ಕಾರ್ಯಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಉಪಾಧ್ಯಕ್ಷರಾದ ಮನೆಯಪಂಡ ಮೋತಿ ಉತ್ತಪ್ಪ, ಎಸ್‌ಡಿಎಂಸಿ ಅಧ್ಯಕ್ಷೆ ಶಾಂತಿ, ಬಿಇಒ ಆನಂದ, ವಿವಿಧ ಉಪ ಸಮಿತಿಯ ಅಧ್ಯಕ್ಷರಾದ ಟಿ.ಎಲ್.ಶ್ರೀನಿವಾಸ್, ಪಿ.ರಾಜ ಶೇಖರ್, ಕೊಳ್ಳಿಮಾಡ ಅಜಿತ್, ಬಿ.ಎನ್. ಪ್ರಕಾಶ್, ಎಂ.ಮAಜುಳಾ, ಪ್ರಮೋದ್ ಕಾಮತ್, ಮಣಿಕಂಠ ಪಿಡಿಓ ತಿಮ್ಮಯ್ಯ, ಶರತ್ ಕಾಂತ್, ಸೇರಿದಂತೆ ಗ್ರಾ.ಪಂ. ಸದಸ್ಯರು ಅನೇಕ ಗಣ್ಯರು ಉಪಸ್ಥಿತರಿದ್ದರು. ಶತಮಾನೋತ್ಸವ ಅಂಗವಾಗಿ ವಿವಿಧ ಸಾಧಕರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ರೈತ ಗೀತೆ ಹಾಗೂ ನಾಡ ಗೀತೆ ಹಾಡಿದರು. ಕಲಾವಿದರಾದ ಸತೀಶ್ ಗಣಪತಿಯ ಚಿತ್ರ ಬಿಡಿಸಿ ಗಮನ ಸೆಳೆದರು. ಡಿ. ಚಂದನ ಮಂಜುನಾಥ್ ಹಾಗೂ ಕೆ.ಬಿ.ಸಂಜೀವ್ ನಿರೂಪಿಸಿ ಮುಖ್ಯೋಪಾಧ್ಯಾಯರಾದ ಹೆಚ್.ಕೆ.ಕುಮಾರ್ ಸ್ವಾಗತಿಸಿದರು. ಸಭೆಯಲ್ಲಿ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿ ಮಹಾದೇವ ಹಿಂದಿನ ನೆನಪುಗಳನ್ನು ಸಭೆಯ ಮುಂದಿಟ್ಟರು. ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು, ಶಾಲೆಯ ಹಳೆಯ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಮುಖರಾದ ಎಂ.ಪಿ.ಕೇಶವ್ ಕಾಮತ್, ಚೆಪ್ಪ್ಪುಡೀರ ದ್ಯಾನ್ ಸುಬ್ಬಯ್ಯ, ಕಾಡ್ಯಮಾಡ ದೇವಯ್ಯ, ಮತ್ತಿತರರು ಹಾಜರಿದ್ದರು.

-ಹೆಚ್. ಕೆ. ಜಗದೀಶ್