ಚೆಯ್ಯಂಡಾಣೆ, ಫೆ. ೩: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಜ್ಞಾನದೀಪ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡೆಸ್ಕ್ ಹಾಗೂ ಬೆಂಚ್‌ಗಳನ್ನು ಕೊಡುಗೆಯಾಗಿ ನೀಡಲಾಗಿದೆ.
ಈ ಸಂದರ್ಭ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಾಗಮಂಡಲ ವಲಯದ ಮೇಲ್ವಿಚಾರಕ ಸುನಿಲ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಕರ್ನಾಟಕ ರಾಜ್ಯದ ಅಳಿವಿನಂಚಿನಲ್ಲಿರುವ ಸರಕಾರಿ ಶಾಲೆಯ ಉಳಿವಿಗಾಗಿ, ಬೆಂಚ್, ಡೆಸ್ಕ್ಗಳ ಕೊರತೆ, ಶಿಕ್ಷಕರ ಕೊರತೆ ಇರುವೆಡೆ ಜ್ಞಾನದೀಪ ಯೋಜನೆಯಡಿಯಲ್ಲಿ ಈ ವರ್ಷ ಸಾವಿರದ ಮೂವತ್ತು ಶಿಕ್ಷಕರನ್ನು ನಿಯೋಜನೆ ಮಾಡಿದ್ದೇವೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಸೌಲಭ್ಯ ಕೊಡುವ ವ್ಯವಸ್ಥೆಯನ್ನು ಕೂಡ ಮಾಡಿದ್ದೇವೆ, ಇನ್ನು ಕೂಡ ಹಲವಾರು ರೀತಿಯ ಯೋಚನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಪೆಮ್ಮಂಡ ಕೌಶಿ ಕಾವೇರಮ್ಮ ಮಾತನಾಡಿ, ಸರ್ಕಾರಿ ಶಾಲೆ ಉಳಿಯಬೇಕಾದರೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಬೇಕು ಶಾಲೆಯ ಬೆಂಚ್, ಡೆಸ್ಕ್ಗಳು ಉತ್ತಮವಾಗಿ ಎಲ್ಲಾ ಸೌಕರ್ಯವಿದ್ದರೆ ವಿದ್ಯಾರ್ಥಿಗಳ ಸಂಖ್ಯೆ ಅಧಿಕವಾಗುವಂತಾಗುತ್ತದೆ. ಸಂಘದಿAದ ಬಡ್ಡಿ ಮಾತ್ರ ವಸೂಲಿ ಮಾಡುತ್ತಾರೆ ಎನ್ನುವವರಿಗೆ ನೀವು ಮಾಡುತ್ತಿರುವ ಸಮಾಜಮುಖಿ ಕಾರ್ಯಗಳನ್ನು ಅರಿವು ಮೂಡಿಸುವಂತಾಗಬೇಕು. ಮುಂದಿನ ದಿನಗಳಲ್ಲಿ ಈ ಶಾಲೆಗೂ ಕೂಡ ಶಿಕ್ಷಕರನ್ನು ನಿಯೋಜನೆ ಮಾಡುವಂತೆ ಮನವಿ ಮಾಡಿದರು.
ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಆರ್. ಪ್ರೇಮಕುಮಾರಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಕಾರ್ಯಕ್ರಮದಡಿಯಲ್ಲಿ ಹತ್ತು ಬೆಂಚುಗಳನ್ನು ನೀಡಲಾಗಿದೆ. ಇದಕ್ಕೆ ನಾವು ಶಾಲೆಯ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷೆ ಮಾಚಮ್ಮ, ಸೇವಾ ಪ್ರತಿನಿಧಿ ಪ್ರಭಾವತಿ, ಸಂಜೀವಿನಿ ಒಕ್ಕೂಟದ ಅಂಬಿಕಾ, ಮೀನಾಕ್ಷಿ, ನಲಿನಿ, ಶಾಲೆಯ ದೈಹಿಕ ಶಿಕ್ಷಕ ಪೂರ್ಣೇಶ್, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.