ಮಡಿಕೇರಿ, ಫೆ. ೩: ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಲಿತ ರತ್ನ ಪ್ರಶಸ್ತಿಯನ್ನು ಸಂಘಟನೆ ಪ್ರಮುಖರು ಭಾಗಮಂಡಲದಲ್ಲಿ ಪ್ರದಾನ ಮಾಡಿದರು. ಈ ಸಂದರ್ಭ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್, ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ, ಡಾ. ದೇವದಾಸ್, ಜಿಲ್ಲಾ ಸಂಘಟನಾ ಸಂಚಾಲಕರುಗಳಾದ ಈರಪ್ಪ, ಹೆಚ್.ವಿ. ಗಣೇಶ್ ಇನ್ನಿತರರು ಹಾಜರಿದ್ದರು.