ಸೋಮವಾರಪೇಟೆ, ಫೆ. ೩: ಮಡಿಕೇರಿ-ಸೋಮವಾರಪೇಟೆ ರಾಜ್ಯ ಹೆದ್ದಾರಿಯ ಕನ್ನಡಾಂಬೆ ಸರ್ಕಲ್ ಬಳಿ ರಸ್ತೆಯ ಬದಿಯಲ್ಲಿಯೇ ಮೀನು ಮಾರಾಟ ನಡೆಯುತ್ತಿರುವುದರಿಂದ ವಾಹನಗಳ ಸಂಚಾರಕ್ಕೆ ತೀವ್ರ ತೊಡಕಾಗಿದೆ.

ಈ ಹಿಂದೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯೊಂದರಲ್ಲಿ ಖುದ್ದು ನ್ಯಾಯಾಧೀಶರೇ ಈ ಸಮಸ್ಯೆಯ ಬಗ್ಗೆ ಸಂಬAಧಿಸಿದ ಪ.ಪಂ. ಅಧಿಕಾರಿಗಳ ಗಮನಕ್ಕೆ ತಂದಿದ್ದರು. ರಸ್ತೆಯ ಬದಿಯಲ್ಲಿ ಮೀನು ಮಾರಾಟ ನಡೆಯುತ್ತಿರುವುದರಿಂದ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಎಂದು ಸೂಚಿಸಿದ್ದರು.

ಇದಾದ ಒಂದೆರಡು ದಿನಗಳ ಕಾಲ ಪ.ಪಂ. ಸಿಬ್ಬಂದಿಗಳು, ಮೀನು ಮಾರಾಟಗಾರರನ್ನು ಎತ್ತಂಗಡಿ ಮಾಡಿಸಿದ್ದರು. ಸಮಸ್ಯೆ ಬಗೆಹರಿಯಿತು ಎಂದುಕೊಳ್ಳುವಷ್ಟರಲ್ಲಿ ಮತ್ತದೇ ವ್ಯವಸ್ಥೆ ಮುಂದುವರೆಯುತ್ತಿದ್ದು, ಸಂತೆ ದಿನವಾದ ಸೋಮವಾರವಂತೂ ಈ ಪ್ರದೇಶ ಕಿಷ್ಕಿಂಧೆಯAತಾಗುತ್ತಿದೆ.

ಮಡಿಕೇರಿ, ಕುಶಾಲನಗರ, ಶಾಂತಳ್ಳಿ ರಸ್ತೆಗಳ ಮೂಲಕ ಪಟ್ಟಣಕ್ಕೆ ಆಗಮಿಸುವ ವಾಹನಗಳು, ಪಟ್ಟಣದಿಂದ ಹೊರ ತೆರಳುವ ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸಬೇಕಿದೆ. ಕನ್ನಡಾಂಬೆ ವೃತ್ತದ ಬಳಿಯಲ್ಲಿ, ರಾಜ್ಯ ಹೆದ್ದಾರಿಯ ಬದಿಯಲ್ಲಿಯೇ ಹತ್ತಾರು ಮಂದಿ ಮೀನು ಮಾರಾಟ ಮಾಡುತ್ತಿರುವುದರಿಂದ ವಾಹನಗಳ ಸುಗಮ ಸಂಚಾರ, ಪಾದಚಾರಿಗಳ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ.

ನೆರೆಯ ಹಾಸನ ಜಿಲ್ಲೆಯ ರಾಮನಾಥಪುರ, ಕೊಣನೂರು, ಗೊರೂರು ಭಾಗದಿಂದ ಆಗಮಿಸುವ ಮಂದಿ ಪಟ್ಟಣದ ರಸ್ತೆ ಬದಿಯಲ್ಲಿ ಮೀನು ವ್ಯಾಪಾರದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಶುಚಿತ್ವಕ್ಕೂ ಆದ್ಯತೆ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ನಾವುಗಳು ವಾರ್ಷಿಕ ಲಕ್ಷಾಂತರ ರೂಪಾಯಿ ಮುಂಗಡ ಹಣ ಪಾವತಿಸಿ, ಮಾಸಿಕ ಸಾವಿರಾರು ರೂಪಾಯಿ ಬಾಡಿಗೆ ಪಾವತಿಸಿಕೊಂಡು ಮೀನು ವ್ಯಾಪಾರ ಮಾಡುತ್ತಿದ್ದೇವೆ. ಶುಚಿತ್ವ ಇಲ್ಲವಾದರೆ ಪ.ಪಂ.ನವರು ದಂಡ ವಿಧಿಸುತ್ತಿದ್ದಾರೆ. ಆದರೆ ಯಾವುದೇ ಬಾಡಿಗೆಯೂ ಇಲ್ಲದೇ, ಶುಚಿತ್ವವೂ ಇಲ್ಲದೆ, ರಸ್ತೆ ಬದಿಯಲ್ಲಿ ಧೂಳು, ಕೊಳಚೆ ಹರಿಯುವ ಚರಂಡಿಯ ಬದಿಯಲ್ಲಿಯೇ ಮೀನು ಮಾರಾಟ ನಡೆಯುತ್ತಿದ್ದರೂ ಪ.ಪಂ. ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸ್ಥಳೀಯ ಮೀನು ಮಾರಾಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ.ಪಂ. ಮುಖ್ಯಾಧಿಕಾರಿ ಸತೀಶ್ ಅವರು ಪ್ರತಿಕ್ರಿಯಿಸಿದ್ದು, ರಸ್ತೆ ಬದಿಯಲ್ಲಿ ಮೀನು ಮಾರಾಟ ಮಾಡುತ್ತಿರುವುದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪೊಲೀಸ್ ಇಲಾಖೆಗೆ ಪತ್ರ ಬರೆದು ಸಹಕಾರ ಕೋರಲಾಗಿದೆ. ಮುಂದಿನ ದಿನಗಳಲ್ಲಿ ರಸ್ತೆ ಬದಿಯಲ್ಲಿ ವ್ಯಾಪಾರ ಕಂಡುಬAದರೆ ಪೊಲೀಸರ ಸಹಕಾರದಿಂದ ತೆರವುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.