ಮಡಿಕೇರಿ, ಫೆ. ೪: ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೆಮಾಡು ಕಾಲೋನಿ, ಕಾನ್ಶಿರಾಮ್ ನಗರ ಕಾಲೋನಿಗೆ ಸಮಾಜ ಕಲ್ಯಾಣ ಇಲಾಖೆ ವಿಶೇಷ ಅನುದಾನದಲ್ಲಿ ಎರಡು ಕೋಟಿ ರೂಪಾಯಿಗಳ ಕಾಮಗಾರಿ ಹಾಗೂ ಹೊದವಾಡ ಕೊಟ್ಟಮುಡಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರೂ. ೧.೩೦ ಕೋಟಿ ಅನುದಾನದ ಕಾಮಗಾರಿಗೆ ಭೂಮಿಪೂಜೆ ಹಾಗೂ ಹೊದವಾಡ ಮತ್ತು ಕೊಟ್ಟಮೂಡಿ ಗ್ರಾಮಗಳಲ್ಲಿ ಪೂರ್ಣಗೊಂಡ ೧ ಕೋಟಿ ರೂಪಾಯಿ ರಸ್ತೆ ಕಾಮಗಾರಿಯನ್ನು ಶಾಸಕ ಡಾ. ಮಂತರ್‌ಗೌಡ ಉದ್ಘಾಟಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ. ಮಹದೇವಪ್ಪ ಅವರ ವಿಶೇಷ ಸಹಕಾರದೊಂದಿಗೆ ಸುಮಾರು ಮೂರು ಕೋಟಿ ಅರವತ್ತು ಲಕ್ಷ ರೂಪಾಯಿಗಳ ವಿಶೇಷ ಅನುದಾನವನ್ನು ಪಡೆದು ಕಾಮಗಾರಿಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಮಂತರ್ ತಿಳಿಸಿದರು. ಹೊದ್ದೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿಗೆ ಶಾಸಕರು ಸ್ಪಂದಿಸಿ ಅನುದಾನಗಳನ್ನು ಯಥೇಚ್ಛವಾಗಿ ಬಿಡುಗಡೆ ಮಾಡುತ್ತಿರುವುದಾಗಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎ. ಹಂಸ ತಿಳಿಸಿದರು. ಕಾರ್ಯಕ್ರಮದಲ್ಲಿ ಹೊದ್ದೂರು ಗ್ರಾಮ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕೆ. ಮೊಣ್ಣಪ್ಪ, ನೀರು ಮತ್ತು ನೈರ್ಮಲ್ಯ ಸಮಿತಿಯ ಅಧ್ಯಕ್ಷ ಎಂ.ಬಿ. ಹಮೀದ್, ಗ್ರಾ.ಪಂ. ಮಾಜಿ ಅಧ್ಯಕ್ಷೆ ಕುಸುಮಾವತಿ, ಗ್ರಾಮ ಪಂಚಾಯಿತಿ ಸದಸ್ಯರಾದ ಕಡ್ಲೆರ ಟೈನಿ, ಹೆಚ್.ಎಂ. ಸರಸು, ಕೆ.ಎಂ. ಮೈದು, ಚೌರಿರ ಅನಿತಾ, ಲಕ್ಷಿö್ಮ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿ.ಜಿ. ಮೋಹನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರಿರ ಮೋಹನ್ ದಾಸ್, ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಕೋಚನ ಹರಿಪ್ರಸಾದ್, ಕೊಟ್ಟಮುಡಿ ಅಬೂಬಕರ್ ಹಾಜಿ, ವಲಯ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ, ಇನ್ನಿತರರು ಹಾಜರಿದ್ದರು.