ಮಡಿಕೇರಿ, ಫೆ. ೪: ಪ್ರಸಕ್ತ (೨೦೨೪-೨೫) ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್‌ಡಿ. ಅಧ್ಯಯನದಲ್ಲಿ ತೊಡಗಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-೧, ೨(ಎ), ೩(ಎ) ಹಾಗೂ ೩(ಬಿ) ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

೨೦೨೪-೨೫ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್‌ಡಿ. ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ ೧೦ ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ನಿಗಧಿಪಡಿಸಿರುವ ವಾರ್ಷಿಕ ಆದಾಯ ಮಿತಿ:- ಪ್ರವರ್ಗ-೧ ರೂ. ೪.೫೦ ಲಕ್ಷ, ಪ್ರವರ್ಗ-೨ಎ, ೩ಎ, ೩ಬಿ ರೂ. ೩.೫೦ ಲಕ್ಷ ಮಿತಿಯಲ್ಲಿರಬೇಕು. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.೫೫ ಅಂಕಗಳನ್ನು ಪಡೆದಿರಬೇಕು. ವಿಶ್ವವಿದ್ಯಾಲಯ/ಅಧಿಕೃತ ಸಂಸ್ಥೆಗಳಲ್ಲಿನ ಸಂಶೋಧನಾ ಮಾರ್ಗದರ್ಶಕರಡಿಯಲ್ಲಿ ಪಿ.ಹೆಚ್.ಡಿ. ಅಧ್ಯಯನಕ್ಕಾಗಿ ನೋಂದಣಿ ಮಾಡಿಕೊಂಡಿರಬೇಕು.

ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಆಫ್-ಲೈನ್ ಅರ್ಜಿ ಪ್ರತಿ ಹಾಗೂ ಮೂಲ ದಾಖಲಾತಿಗಳನ್ನು ದಿನಾಂಕ:೧೦-೨-೨೦೨೫ರೊಳಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಮ್ಯಾನ್ಸ್ ಕಾಂಪೌAಡ್ ಹತ್ತಿರ ದೇವರಾಜ ಅರಸು ಭವನ, ಮಡಿಕೇರಿ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ವಿವರಗಳು ಇಲಾಖಾ ವೆಬ್‌ಸೈಟ್ hಣಣಠಿs://ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಲಭ್ಯ ಇರುತ್ತದೆ ಎಂದು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಇವರು ತಿಳಿಸಿದ್ದಾರೆ. ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೪ ಅಥವಾ ಹೆಚ್ಚಿನ ಮಾಹಿತಿಗೆ ಕಚೇರಿ ವೇಳೆಯಲ್ಲಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.