ಮಡಿಕೇರಿ, ಫೆ. ೪: ಕರ್ನಾಟಕ ಸರ್ಕಾರ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ ೫ ರಿಂದ ೧೧ ರವರೆಗೆ ಕಾವೇರಿ ವಸ್ತçಸಿರಿ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ನಗರದ ಕೊಡವ ಸಮಾಜದ ಪ್ರಾಂಗಣದಲ್ಲಿ ನಡೆಯಲಿದೆ.
ಫೆಬ್ರವರಿ ೫ ರಂದು (ಇಂದು) ಮಧ್ಯಾಹ್ನ ೩ ಗಂಟೆಗೆ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಉದ್ಘಾಟನಾ ಸಮಾರಂಭ ನಡೆಯಲಿದೆ.