ಮಡಿಕೇರಿ, ಫೆ. ೫: ೨೦೨೪-೨೫ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪಿçಂಕ್ಲರ್ಗೆ ಶೇ. ೯೦ ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ.
ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ. ೯೦ ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ.
ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರಗಳಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಹಾಗೂ ಎರಡು ಸ್ಟಾö್ಯಂಪ್ ಅಳತೆಯ ಫೋಟೋಗಳನ್ನು ಸಲ್ಲಿಸುವುದರ ಮುಖಾಂತರ ಈ ಯೋಜನೆಯ ಫಲಾನುಭವಿಗಳಾಗಬಹುದು.
ಈ ಯೋಜನೆಯಡಿ ಒಂದು ಎಕರೆ ಜಮೀನಿಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ರೈತರು ರೂ. ೪೬೬೭ ಹಣವನ್ನು ಪಾವತಿಸುವ ಮೂಲಕ ಒಟ್ಟು ೩೦ ಪೈಪುಗಳು ಹಾಗೂ ೫ ಸ್ಪಿçಂಕ್ಲರ್ ಜೆಟ್ಗಳು ಹಾಗೂ ಇತರೆ ಜೋಡಣಾ ಸಾಮಗ್ರಿಗಳನ್ನು ಪಡೆಯಬಹುದು.
ಒಂದು ಎಕರೆಗಿಂತ ಕಡಿಮೆ ವಿಸ್ತೀರ್ಣ ಹಾಗೂ ಅರ್ಧ ಎಕರೆಗಿಂತ ಹೆಚ್ಚು ವಿಸ್ತೀರ್ಣ ಜಮೀನು ಹೊಂದಿರುವ ರೈತರು ರೂ. ೨೪೯೬ ಹಣವನ್ನು ಪಾವತಿಸುವುದರ ಮುಖಾಂತರ ೧೮ ಪೈಪುಗಳು ಮತ್ತು ೩ ಸಂಖ್ಯೆಯ ಜೆಟ್ಗಳನ್ನು ಹಾಗೂ ಇತರೆ ಜೋಡಣಾ ಸಾಮಗ್ರಿಗಳನ್ನು ಕೃಷಿ ಇಲಾಖೆಯಿಂದ ಪಡೆದುಕೊಂಡು ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿಯನ್ನು ಹಾಯಿಸಿ ಹೆಚ್ಚಿನ ಇಳುವರಿಯನ್ನು ಪಡೆಯಬಹುದು. ಈ ಸೌಲಭ್ಯವನ್ನು ಸಾಮಾನ್ಯ ರೈತರಿಗೆ ಒಂದು ಬಾರಿ ಮಾತ್ರ ವಿತರಿಸಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ೭ ವರ್ಷಗಳ ನಂತರ ಈ ಸೌಲಭ್ಯವನ್ನು ಮತ್ತೊಮ್ಮೆ ನೀಡಲಾಗುತ್ತದೆ. ಮಡಿಕೇರಿ ತಾಲೂಕು ವ್ಯಾಪ್ತಿಯ ಎಲ್ಲಾ ರೈತ ಬಾಂಧವರು ಈ ಸೌಲಭ್ಯವನ್ನು ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ ಮಡಿಕೇರಿ ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರವೀಣ್ ಎಂ. ಅವರು ತಿಳಿಸಿದ್ದಾರೆ.