ಮಡಿಕೇರಿ, ಫೆ. ೫: ಕರ್ನಾಟಕ ಸರ್ಕಾರ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತಾ.೧೧ ರವರೆಗೆ ನಡೆಯುವ ಕಾವೇರಿ ವಸ್ತçಸಿರಿ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಬುಧವಾರ ಚಾಲನೆ ದೊರೆಯಿತು.
ನಗರದ ಕೊಡವ ಸಮಾಜದ ಪ್ರಾಂಗಣದಲ್ಲಿ ಕೊಡಗು ಜಿಲ್ಲಾ ಕೈಗಾರಿಕಾ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಸಿ.ವಿ.ನಾಗೇಶ್ ಅವರು ಮೇಳಕ್ಕೆ ಚಾಲನೆ ನೀಡಿದರು.
ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ, ಕೈಗಾರಿಕೆ ಇಲಾಖೆಯ ಉಪ ನಿರ್ದೇಶಕ ರಘು, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಲಿಂಗರಾಜ ದೊಡ್ಡಮನಿ, ಖಾದಿ ಮಂಡಳಿ ಅಧಿಕಾರಿ ಎಚ್.ಆರ್. ರಾಮಕೃಷ್ಣ, ಕೈಮಗ್ಗ ಸಹಕಾರ ಸಂಘದ Pv ನಿರ್ದೇಶಕ ಲಿಂಗರಾಜ ದೊಡ್ಡಮನಿ, ಖಾದಿ ಮಂಡಳಿ ಅಧಿಕಾರಿ ಎಚ್.ಆರ್. ರಾಮಕೃಷ್ಣ, ಕೈಮಗ್ಗ ಸಹಕಾರ ಸಂಘದ ಕಾರ್ಯದರ್ಶಿ ಸವಿತ, ಇತರರು ಇದ್ದರು. ಸುಮಾರು ೨೫ ಕ್ಕೂ ಹೆಚ್ಚು ಮಳಿಗೆಗಳು ಇವೆ.