ಮಡಿಕೇರಿ, ಫೆ. ೫: ಸ್ವಾತಂತ್ರö್ಯ ಯೋಧ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೮ನೇ ಜನ್ಮ ದಿನಾಚರಣೆ ಹಾಗೂ ನೇತಾಜಿ ಯುವಕ ಹಾಗೂ ಯುವತಿ ಮಂಡಲದ ೩೩ನೇ ವಾರ್ಷಿಕೋತ್ಸವವನ್ನು ತಾಳತ್ತಮನೆಯಲ್ಲಿ ಸಂಭ್ರಮದಿAದ ಆಚರಿಸಲಾಯಿತು.

ನೇತಾಜಿ ಯುವಕ ಹಾಗೂ ಯುವತಿ ಮಂಡಳಿ, ಮಡಿಕೇರಿ ನೆಹರು ಯುವ ಕೇಂದ್ರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಮತ್ತು ಮಡಿಕೇರಿ ತಾಲೂಕು ಯುವ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ತಾಳತ್ತಮನೆಯ ಆಟದ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಆಕ್ಸಿರಿಚ್ ಮಾಲೀಕ ಪಿ.ಟಿ. ಉಣ್ಣಿ ಕೃಷ್ಣ ಉದ್ಘಾಟಿಸಿದರು.

ನೇತಾಜಿ ಮಂಡಳಿಯ ಅಧ್ಯಕ್ಷ ಕೊಂಡಿರ ಪಿ. ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾಜೀವ್ ಲೋಚನ, ಮದೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಜಿ. ಯಾದವ್, ಉದ್ಯಮಿ ಮುದ್ಯನ ಕಿಶನ್, ಮದೆ ಪಂಚಾಯಿತಿ ಅಧ್ಯಕ್ಷೆ ವಿಮಲಾಕ್ಷಿ, ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಗುತ್ತಿಗೆದಾರರು ಹಾಗೂ ಮದೆ ಪಂಚಾಯಿತಿ ಸದಸ್ಯರುಗಳಾದ ಬಿ.ಆರ್. ಸದಾಶಿವ ರೈ ಹಾಜರಿದ್ದರು.

ನೇತಾಜಿ ಯವಕ-ಯುವತಿ ಮಂಡಲದ ವಾರ್ಷಿಕೋತ್ಸವದ ಅಂಗವಾಗಿ ಸಂಜೆ ಯುವತಿ ಮಂಡಳಿ ಅಧ್ಯಕ್ಷರಾದ ಸಿಂಧು ಸುದೇವ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಂ.ಎಸ್. ಪೈ ಮಾಲೀಕ ಬಿ.ಕೆ. ಸೀತಾರಾಮ ರೈ, ಹೊಟೇಲ್ ಸಮುದ್ರ ಮಾಲಿಕ ಶರತ್ ಶೆಟ್ಟಿ, ಉದ್ಯಮಿ ಪ್ರಿಯಾ ದಿನೇಶ್ ಹಾಜರಿದ್ದರು. ಭಾರತದ ಮಹಾನ್ ಸ್ವಾತಂತ್ರ‍್ಯ ಯೋಧ ನೇತಾಜಿ ಸುಭಾಷ್ ಚಂದ್ರ ಬೋಸ್ ಇವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ನೇತಾಜಿ ಯವಕ ಮಂಡಲದ ವಾರ್ಷಿಕೋತ್ಸವದ ಅಂಗವಾಗಿ ಮೈಸೂರಿನ ನಾರಾಯಣ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ನಂತರ ಜಿಲ್ಲಾಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ನಡೆಸಲಾಯಿತು.

ಸಮಾರೋಪ ಸಮಾರಂಭ : ಸಂಜೆ ತಾಳತ್ತಮನೆ ಶ್ರೀ ದುರ್ಗಾ ಭಗವತಿ ದೇವಸ್ಥಾನದ ಅಧ್ಯಕ್ಷ ಚೆಟ್ಟೋಳಿರ ಗಿರೀಶ್ ಅಪ್ಪಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಬಿ.ಸಿ. ದೊಡ್ಡಗೌಡ ಮಾತನಾಡಿದರು. ಆಡಳಿತ ಮಂಡಳಿ ಮಾಜಿ ಸದಸ್ಯ ಜೆ.ಜಿ. ಕಾವೇರಪ್ಪ, ಬೆಂಗಳೂರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಮದೆ ಗ್ರಾಮ ಪಂಚಾಯಿತಿ ಸದಸ್ಯೆ ಬಿ.ಎಸ್. ನವೀನ ಹಾಜರಿದ್ದರು.

ಬಿ.ಕೆ. ಸಿಂಚನ, ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ ಪ್ರಶಸ್ತಿ ವಿಜೇತೆ ಬಿ.ಕೆ. ಸಿಂಚನ ಹಾಗೂ ನೇತಾಜಿ ಯುವಕ ಮಂಡಲದ ಮಾಜಿ ಅಧ್ಯಕ್ಷ ಕೆ.ಆರ್. ಕುಶಾಲಪ್ಪ, ನೇತಾಜಿ ಯುವಕ ಮಂಡಲದ ಮಾಜಿ ಅಧ್ಯಕ್ಷೆ ಎ.ಆರ್. ನೇತ್ರಾವತಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಜಿಲ್ಲಾ ಮಟ್ಟದ ಹಗ್ಗಜಗ್ಗಾಟದಲ್ಲಿ ವಿಜೇತ ರಾದವರಿಗೆ ಬಹುಮಾನ ವಿತರಿಸ ಲಾಯಿತು. ಅಲ್ಲದೇ ತಾಳತ್ತಮನೆಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಸಂಜೆ ನಡೆದ ಅಂತರರಾಜ್ಯಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಡೆಸ ಲಾಯಿತು. ಫೈನಲ್ ಪಂದ್ಯಾವಳಿ ಯಲ್ಲಿ ಮಡಿಕೇರಿ ಭಗವತಿ ಫಂಡ್ಸ್ ಚಾಂಪಿಯನ್‌ಶಿಪ್ ಪಡೆದುಕೊಂಡರೆ, ಕಾಟಕೇರಿ ಭಗವತಿ ಕಾಫಿ ಲಿಂಕ್ಸ್ ತಂಡ ದ್ವಿತೀಯ ಸ್ಥಾನ ಪಡೆದು ಕೊಂಡಿತು. ಜಿಲ್ಲಾಮಟ್ಟದ ವಿವಿಧ ಸಾಂಸ್ಕAತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು. ಹಾಜರಿದ್ದ ಎಲ್ಲಾ ಕ್ರೀಡಾಪಟುಗಳು, ಸಾರ್ವಜನಿಕರಿಗೆ ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆಯನ್ನು ಯುವಕ ಮಂಡಲದ ವತಿಯಿಂದ ಕಲ್ಪಿಸಲಾಗಿತ್ತು.