ಕುಶಾಲನಗರ, ಫೆ. ೧೪ : ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ಕುಶಾಲನಗರದಲ್ಲಿ ಎಸ್ ಡಿ ಪಿ ಐ ಕಾರ್ಯಕರ್ತರಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು.

ಕುಶಾಲನಗರದ ಗಣಪತಿ ದೇವಾಲಯದ ಎದುರು ಜಮಾಯಿಸಿದ ಎಸ್‌ಡಿಪಿಐ ಕಾರ್ಯಕರ್ತರು ವಕ್ಫ್ ಆಸ್ತಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಸರ್ಕಾರಗಳು ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರ ಈ ಮಂಡಿಸಿದ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಅಧ್ಯಕ್ಷ ಅಬ್ದುಲ್ಲಾ ಅಡ್ಕಾರ್, ಕಾರ್ಯದರ್ಶಿ ಉಸ್ಮಾನ್, ಕುಶಾಲನಗರದ ಪ್ರಮುಖರಾದ ಜಕರಿಯ, ಭಾಷಾ ಮತ್ತಿತರರು ಇದ್ದರು.

ಮಡಿಕೇರಿ : ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯನ್ನು ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಮಡಿಕೇರಿಯ ಚೌಕಿ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಯಿತು. ಪಕ್ಷದ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯ ಮನ್ಸೂರ್ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.