ಕುಶಾಲನಗರ, ಫೆ. ೧೪: ಕುಶಾಲನಗರ ಪಟ್ಟಣದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಾಲಾ ವಾರ್ಷಿಕೋತ್ಸವ ಅದ್ದೂರಿಯಿಂದ ನಡೆಯಿತು. ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಸಮಾರಂಭ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳು ಓದುವ ಮೂಲಕ ಜ್ಞಾನವಂತರಾಗಿ ಜೀವನದಲ್ಲಿ ಘನತೆ ಗೌರವ ಲಭಿಸುವ ಗುರಿ ಹೊಂದಬೇಕು. ಬದುಕಿನಲ್ಲಿ ಅಧ್ಯಯನ ಶೀಲತೆ ಸೃಜನಶೀಲತೆ ಮೂಲಕ ಕ್ರಿಯಾಶೀಲವಾಗಿ ಇರಲು ಸಾಧ್ಯ. ಜ್ಞಾನದ ಮೂಲಕ ಗೌರವ ಸಂಪಾದಿಸಬಹುದು ಎಂದರು.
ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಮತ್ತಿತರ ಗಣ್ಯರು ಓದಿದ ಶಾಲೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು.
ಅಂದಾಜು ರೂ. ೫ ಕೋಟಿ ವೆಚ್ಚದಲ್ಲಿ ಶಾಲೆಗೆ ಉತ್ತಮ ಸಭಾಂಗಣ ನಿರ್ಮಾಣ ಮಾಡುವ ಚಿಂತನೆಯನ್ನು ಹಳೆಯ ವಿದ್ಯಾರ್ಥಿಗಳು ಹೊಂದಿದ್ದಾರೆ ಎಂದು ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ತಾಲೂಕು ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಅವರು ಮಾತನಾಡಿ, ವಿದ್ಯಾರ್ಥಿ ಗಳು ಗುರು ಹಿರಿಯರಿಗೆ ಸದಾ ಗೌರವ ನೀಡಬೇಕು.
ಉತ್ತಮ ವಿದ್ಯಾರ್ಥಿಗಳಾಗಿ ಶಾಲೆ ಶಿಕ್ಷಕರ ಹಾಗೂ ಪೋಷಕರ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಜ್ಞಾನಾರ್ಜನೆ ಗಳಿಸಬೇಕು ಎಂದರು.
ಈ ಸಂದರ್ಭ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಎಂ.ಹೆಚ್. ನಜೀರ್ ಅಹಮದ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಾಧಕ ವಿದ್ಯಾರ್ಥಿಗಳಾದ ರೋಹಿತ್, ಕೀರ್ತನ ಅವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದನ್ ಕುಮಾರ್ ನೇತೃತ್ವದಲ್ಲಿ ನಡೆದ ಅದ್ದೂರಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪುರಸಭೆಯ ಉಪಾಧ್ಯಕ್ಷೆ ಪುಟ್ಟ ಲಕ್ಷö್ಮಮ್ಮ, ಸದಸ್ಯರಾದ ಆನಂದಕುಮಾರ್, ಮುಖ್ಯೋಪಾಧ್ಯಾಯಿನಿ ಭಾರತಿ, ನಿವೃತ್ತ ಮುಖ್ಯೋಪಾಧ್ಯಾಯಿನಿ ರಾಣಿ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಮತ್ತಿತರರು ಇದ್ದರು.