ಮಡಿಕೇರಿ, ಫೆ. ೧೪: ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ "ಸಂಘ" ವರ್ಚುವಲ್ ಎಂಬ ವಿಶೇಷ ಕ್ಷೇತ್ರ ನೀಡಿರುವ ರೀತಿಯಲ್ಲಿ ಆದಿಮಸಂಜಾತ ಕೊಡವರಿಗೆ ಕೊಡವ ಸಾಂಪ್ರದಾಯಿಕ ಜನ್ಮಭೂಮಿಯಲ್ಲಿ ಪ್ರತ್ಯೇಕ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಕೊಡವ ಮತ-ಕ್ಷೇತ್ರವನ್ನು ರಚಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ ಅವರು ಒತ್ತಾಯಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿಯುತ ಸತ್ಯಾಗ್ರಹ ನಡೆಸಿದ ಸಂಘಟನೆಯ ಸದಸ್ಯರು, ರಾಜ್ಯ-ಕೇಂದ್ರ ಸರಕಾರಗಳಿಗೆ ಕೊಡಗು ಜಿಲ್ಲಾಡಳಿತ ಮೂಲಕ ಜ್ಞಾಪನಾ ಪತ್ರ ಸಲ್ಲಿಸಿದರು. ಜ್ಞಾಪನಾ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸ್ವೀಕರಿಸಿದರು.

ಈ ಸಂದರ್ಭ ಮಾತನಾಡಿದ ನಾಚಪ್ಪ ಅವರು, ಕೇವಲ ಮೂರುವರೆ ಸಾವಿರದಷ್ಟಿರುವ ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ "ಸಂಘ" ವರ್ಚುವಲ್ ಇಂಟ್ಯಾAಜಿಬಲ್ (ಅದೃಶ್ಯ) ಮತ ಕ್ಷೇತ್ರ ನೀಡಿರುವ ರೀತಿಯಲ್ಲಿ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶೇಷ ಪ್ರಾತಿನಿಧ್ಯ, ಅಥವಾ ಪರ್ಯಾಯವಾಗಿ, ಕೊಡವ ಸಾಂಪ್ರದಾಯಿಕ ಆವಾಸಸ್ಥಾನವನ್ನು ಒಳಗೊಂಡಿರುವ ವಿಶೇಷ ಕೊಡವ ಅಸೆಂಬ್ಲಿ ಮತ್ತು ಸಂಸದೀಯ ಕ್ಷೇತ್ರವನ್ನು ರಚಿಸಬೇಕೆಂದು ಆಗ್ರಹಿಸಿದರು. ೨೦೨೬ರಲ್ಲಿ ಸಂಸತ್ತಿನ ಮತ್ತು ವಿಧಾನಸಭೆಯ ಕ್ಷೇತ್ರದ ಗಡಿ ಮತ್ತು ಸಂಖ್ಯೆ ಪುನರ್ ನಿರ್ಣಯಿಸಲಾಗುತ್ತದೆ. ಇದಕ್ಕಾಗಿ ಪ್ರಕ್ರಿಯೆಯು ಪ್ರಾರಂಭವಾಗಿದೆ. ಇದರ ದುರ್ಲಾಭವನ್ನು ಪಡೆದುಕೊಂಡು ಕೆಲವರು ಮೌನವಾಗಿ ಆದಿಮಸಂಜಾತ ಕೊಡವರನ್ನು ಹಣಿದು ಅಂಚಿಗೆ ಹಾಕಲು ಸಂಚು ಹೂಡುತ್ತಿದ್ದಾರೆ. ರಾಜ್ಯದಲ್ಲಿ ಗರಿಷ್ಠ ಪ್ರಾತಿನಿಧ್ಯವನ್ನು ಹೊಂದಿರುವ ಜನಸಂಖ್ಯಾ ಪ್ರಾಭಲ್ಯದ ಕೂಟ ಕೊಡಗಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರವನ್ನು ನಿರ್ಮಿಸುವ ನೆಪದಲ್ಲಿ ಸುಳ್ಯ ತಾಲೂಕನ್ನು ಕೊಡಗಿಗೆ ಸೇರಿಸಿ ಪ್ರತ್ಯೇಕ ಕೊಡಗು ಲೋಕಸಭಾ ಕ್ಷೇತ್ರ ನಿರ್ಮಿಸಿ ಶಾಶ್ವತವಾಗಿ ತಾವು ಸಂಸತ್ ಪ್ರಾತಿನಿಧ್ಯ ಪಡೆಯುವುದರೊಂದಿಗೆ ಕೊಡವರಿಗೆ ಸಂಸತ್ತಿನಲ್ಲಿ ಪ್ರಾತಿನಿಧ್ಯ ದಕ್ಕದಂತೆ ಒಳಸಂಚು ರೂಪಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

ರಾಜಕೀಯ ಕ್ಷೇತ್ರದಲ್ಲಿ ನಮಗೆ ಗೌರವಾನ್ವಿತ ಸ್ಥಾನಬೇಕು. ನಮ್ಮ ರಾಷ್ಟçದ ಸಂಸತ್‌ನಲ್ಲಿ ಮತ್ತು ವಿಧಾನಸಭೆಯಲ್ಲಿ ನಮಗೆ ಪ್ರಾತಿನಿಧ್ಯವಿರಬೇಕು. ಭಾರತವು ಅತಿದೊಡ್ಡ ಜನಾಂಗೀಯ ವೈವಿಧ್ಯತೆ ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿರುವ ರಾಷ್ಟçವಾಗಿದೆ. ನಮ್ಮ ಸಂವಿಧಾನವು ಹೊಂದಿಕೊಳ್ಳುವ ಮತ್ತು ಅದರ ಸ್ವರೂಪದಲ್ಲಿ ಅಳವಡಿಸಿಕೊಳ್ಳಬಹುದಾದ ಸಾರ್ವಕಾಲಿಕ ವಿಕಾಸಪೂರ್ಣ ಸಂವಿಧಾನವಾಗಿದೆ.

ಆದ್ದರಿಂದ ಸೂಕ್ಷ÷್ಮ, ದೇಶಭಕ್ತ ಕೊಡವ ಸಮುದಾಯವನ್ನು ಸಬಲೀಕರಣಗೊಳಿಸಲು, ಕೊಡವ ಸಾಂಪ್ರದಾಯಿಕ ಆವಾಸಸ್ಥಳಕ್ಕೆ ವಿಶೇಷ ಪ್ರಾತಿನಿಧ್ಯವನ್ನು ರಚಿಸುವ ಮೂಲಕ ಅಥವಾ ಪರ್ಯಾಯವಾಗಿ, ಸಂಸತ್ತಿನಲ್ಲಿ ಮತ್ತು ವಿಧಾನಸಭೆಯಲ್ಲಿ ನಮಗೆ ಅವಕಾಶ ಕಲ್ಪಿಸಬೇಕಿರುವುದು ಅನಿವಾರ್ಯವಾಗಿದೆ ಎಂದರು.

ಸತ್ಯಾಗ್ರಹದಲ್ಲಿ ಕಲಿಯಂಡ ಮೀನಾ ಕಾರ್ಯಪ್ಪ, ರೇಖಾ ನಾಚಪ್ಪ, ಪಟ್ಟಮಾಡ ಲಲಿತಾ ಗಣಪತಿ, ಚೋಳಪಂಡ ಜ್ಯೋತಿ ನಾಣಯ್ಯ, ಮುದ್ದಿಯಡ ಲೀಲಾವತಿ, ಕಲಿಯಂಡ ಪ್ರಕಾಶ್, ಅಳ್ಮಂಡ ಜೈ ಗಣಪತಿ, ಕಾಂಡೆರ ಸುರೇಶ್, ಅಜ್ಜಿಕುಟ್ಟಿರ ಲೋಕೇಶ್, ಅರೆಯಡ ಗಿರೀಶ್, ಬೊಟ್ಟಂಗಡ ಗಿರೀಶ್, ಮಂದಪAಡ ಮನೋಜ್, ಬೇಪಡಿಯಂಡ ದಿನು, ಕಿರಿಯಮಾಡ ಶರಿನ್, ಪುಲ್ಲೆರ ಕಾಳಪ್ಪ, ಅಪ್ಪೇಂಗಡ ಮಾಲೆ, ಕಾಟುಮಣಿಯಂಡ ಉಮೇಶ್, ಚಂಗAಡ ಚಾಮಿ ಪಳಂಗಪ್ಪ, ಚೀಯಬೆರ ಸತೀಶ್, ನಂದಿನೆರವAಡ ವಿಜು, ನಂದಿನೆರವAಡ ಅಪ್ಪಯ್ಯ, ಬಾಚಿನಾಡಂಡ ಗಿರೀಶ್, ಅಪ್ಪಾರಂಡ ಪ್ರಸಾದ್, ತೋಲಂಡ ಸೋಮಯ್ಯ, ಕೂಪದಿರ ಸಾಬು, ಪುಟ್ಟಿಚಂಡ ಡಾನ್, ಮಣವಟ್ಟಿರ ಚಿಣ್ಣಪ್ಪ, ಚೋಳಪಂಡ ನಾಣಯ್ಯ, ಅಜ್ಜಿನಿಕಂಡ ಸನ್ನಿ, ಬೊಳ್ಳಜಿರ ಅಯ್ಯಪ್ಪ, ನಂದೇಟಿರ ರವಿ, ಅಚ್ಚಕಾಳೆರ ಸುರೇಶ್, ಸಾದೆರ ರಮೇಶ್ ಭಾಗವಹಿಸಿದ್ದರು.