ವೀರಾಜಪೇಟೆ, ಫೆ. ೨೦: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೈರಂಬಾಡಕ್ಕೆ ರಾಜ್ಯಮಟ್ಟದ ಅತ್ಯುತ್ತಮ ಶಾಲೆ ಪ್ರಶಸ್ತಿ ಲಭಿಸಿದೆ. ಚೇತನ ಫೌಂಡೇಶನ್ ಧಾರವಾಡ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಹಾಗೂ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ‘ಮೈಸೂರು ನುಡಿ ಸಡಗರ’ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಶಾಲೆಯ ಸರ್ವ ಅಭಿವೃದ್ಧಿಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿದ್ದು ಶಾಲಾ ಮುಖ್ಯ ಶಿಕ್ಷಕಿ ಹೆಚ್.ಎನ್. ಪದ್ಮ ಅರ್ಜುನ್ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡರು.