ಮುಳ್ಳೂರು, ಫೆ. ೨೦: ಸಮೀಪದ ಶನಿವಾರಸಂತೆ ಶ್ರೀ ಮಂಜುನಾಥಸ್ವಾಮಿ ಪಾದಯಾತ್ರೆ ಸಮಿತಿ ವತಿಯಿಂದ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ೨೭ನೇ ವರ್ಷದ ಪಾದಯಾತ್ರೆಯನ್ನು ತಾ. ೨೩ ರಿಂದ ೨೫ ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಪಾದಯಾತ್ರೆ ಸಮಿತಿಯ ಪ್ರಕಟಣೆ ತಿಳಿಸಿದೆ. ತಾ. ೨೩ ರಂದು ಬೆಳಿಗ್ಗೆ ೮.೩೦ಕ್ಕೆ ಶನಿವಾರಸಂತೆ ಮುಖ್ಯರಸ್ತೆಯಲ್ಲಿರುವ ಶ್ರೀ ಗಣಪತಿ ದೇವಸ್ಥಾನದಲ್ಲಿ ಪಾದಯಾತ್ರಿಗಳು ಶ್ರೀ ವಿನಾಯಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಬೆಳಿಗ್ಗೆ ೯ ಗಂಟೆಗೆ ಪಾದಯಾತ್ರೆ ಆರಂಭವಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ೯೪೮೦೦೯೩೯೪೯, ೯೪೮೦೭೦೧೨೩೮ ಸಂಪರ್ಕಿಸಬಹುದಾಗಿದೆ.