ಮಡಿಕೇರಿ, ಫೆ.೨೧ : ಮೈಸೂರಿನ ಗ್ರಾಮಾಂತರ ಬುದ್ಧಿಜೀವಿಗಳ ಬಳಗದ ವತಿಯಿಂದ ನೀಡಲಾಗುವ ವಿಶ್ವಮಾನ್ಯ ಕನ್ನಡಿಗ ರಾಜ್ಯ ಪ್ರಶಸ್ತಿಗೆ ಬರಹಗಾರ್ತಿ, ಚಿತ್ರ ನಿರ್ಮಾಪಕಿ, ನಟಿ ಹಾಗೂ ಸಹನಿರ್ದೇಶಕಿ ಈರಮಂಡ ಹರಿಣಿ ವಿಜಯ್ ಆಯ್ಕೆಯಾಗಿದ್ದಾರೆ.

ಗ್ರಾಮಾಂತರ ಬುದ್ಧಿಜೀವಿಗಳ ಬಳಗದ ೪೦ನೇ ವಾರ್ಷಿಕೋತ್ಸವದ ಅಂಗವಾಗಿ ಮೈಸೂರಿನ ಇನ್ಸಿ÷್ಟಟ್ಯೂಟ್ ಆಫ್ ಇಂಜಿನಿಯರಿAಗ್ ಸಭಾಂಗಣದಲ್ಲಿ ತಾ. ೨೩ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯುವ ರಾಷ್ಟçಕವಿ ಕುವೆಂಪು ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಈರಮಂಡ ಹರಿಣಿ ವಿಜಯ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಸಾಹಿತ್ಯೋತ್ಸವವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಶಿ ಉದ್ಘಾಟಿಸಲಿದ್ದು, ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಡಾ.ಭೇರ್ಯ ರಾಮಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.