ಶನಿವಾರಸಂತೆ, ಫೆ. ೨೧: ಕೊಡಗು ಜಿಲ್ಲಾ ಕಟ್ಟಡ ನಿರ್ಮಾಣ ಕಾರ್ಮಿಕ ಹಾಗೂ ಇತರೆ ಕೂಲಿ ಕಾರ್ಮಿಕರ ಸಂಘದ ವತಿಯಿಂದ ಎಲ್ಲಾ ಕಟ್ಟಡ ಕಾರ್ಮಿಕರ ಸಹಕಾರದೊಂದಿಗೆ ಕಾನೂನು ಅರಿವು ಕಾರ್ಯಕ್ರಮ ತಾ. ೨೨ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕಾರ್ಮಿಕರ ಸಂಘದ ಗೌರವಾಧ್ಯಕ್ಷ ರತ್ನಾಕರ್ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಡಾ. ಮಂತರ್ ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಹಾಗೂ ಸೋಮವಾರಪೇಟೆ ಸೀನಿಯರ್ ಲೇಬರ್ ಇನ್ಸ್ಪೆಕ್ಟರ್ ಎಸ್. ಶಶಿಧರ್ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪ್ರೊಬೆಷನರಿ ಐಪಿಎಸ್ ಡಾ. ಬೆನಕ ಪ್ರಸಾದ್, ರಾಜ್ಯ ಕಾರ್ಮಿಕ ಮುಖಂಡ ನಾಪಂಡ ಮುತ್ತಪ್ಪ, ವೈದ್ಯಾಧಿಕಾರಿ ಡಾ. ಅಶೋಕ್, ವಲಯ ಅರಣ್ಯಾಧಿಕಾರಿ ಪೂಜಾಶ್ರೀ, ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್, ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸತ್ಯವತಿ, ಸಹಕಾರ ಸಂಘದ ಅಧ್ಯಕ್ಷ ಎಸ್.ಸಿ. ಶರತ್ ಶೇಖರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸರ್ದಾರ್, ಸದಸ್ಯರಾದ ಎಸ್.ಎನ್. ರಘು, ಸಿ.ಜೆ. ಗಿರೀಶ್, ವಕೀಲ ಎಂ.ಎನ್. ಶಂಕರ್, ಪ್ರಮುಖರಾದ ಅಬ್ಬಾಸ್, ರಂಗಸ್ವಾಮಿ, ಪಿಡಿಓಗಳಾದ ಹರೀಶ್, ಆಯಿಷಾ ಪಾಲ್ಗೊಳ್ಳುತ್ತಾರೆ ಎಂದು ಸಂಘದ ಆಡಳಿತ ಮಂಡಳಿ ಅಧ್ಯಕ್ಷ ವಿಠಲ್ ನಾಗರಾಜ್ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.