ಮುಳ್ಳೂರು, ಫೆ. ೨೧: ಸಮೀಪದ ಮಾಲಂಬಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ೨೦೨೪-೨೫ನೇ ಸಾಲಿನ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘ ಮತ್ತು ಗ್ರಾಮಸ್ಥರ ಸಹ ಭಾಗಿತ್ವದಲ್ಲಿ ತಾ. ೨೧ ರಂದು (ಇಂದು) ಶಾಲಾ ವಾರ್ಷಿಕೋತ್ಸವ ಮತ್ತು ಗ್ರಾಮೀಣ ಕ್ರೀಡಾಕೂಟ ಹಾಗೂ ಸಂಗೀತ ಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಬೆಳಿಗ್ಗೆಯಿಂದ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಗ್ರಾಮದ ಮಹಿಳೆಯರಿಗೆ, ಪುರುಷರಿಗೆ, ಯುವಕ, ಯುವತಿಯರಿಗೆ ವಿವಿಧ ಕ್ರೀಡಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಕ್ರೀಡಾಕೂಟದ ನಂತರ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದ ಬಳಿಕ ಶಾಲಾ ವಾರ್ಷಿಕೋತ್ಸವ ಅಂಗವಾಗಿ ವೇದಿಕೆ ಕಾರ್ಯಕ್ರಮವನ್ನು ನಡೆಸಲಾಗುತ್ತದೆ ಮತ್ತು ಸಂಜೆ ಶನಿವಾರಸಂತೆ ಜೇನುಕಲ್ಲು ಮೆಲೋಡಿಸ್ ತಂಡದವರಿAದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯುತ್ತದೆ ಎಂದು ವಿದ್ಯಾರ್ಥಿ ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.