ಕೂಡಿಗೆ, ಫೆ. ೨೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿರುವ ಕುಶಾಲನಗರ ಪುರಸಭೆಯ ಕಸ ವಿಲೇವಾರಿ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡ ಘಟನೆ ಶುಕ್ರವಾರ ಸಂಜೆ ಸಂAಭವಿಸಿದೆ.

ಬೆAಕಿ ಜೊತೆಯಲ್ಲಿ ದಟ್ಟ ಹೊಗೆ ಆವರಿಸಿದ ಪರಿಣಾಮ ಕಸ ವಿಲೇವಾರಿ ಘಟಕದ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಮನೆಗಳಿಗೆ ಹೊಗೆ ಆವರಿಸಿ ಪರದಾಡುವಂತಾಯಿತು. ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿ ಶಾಮಕ ದಳ ಮತ್ತು ಪುರಸಭೆಯ ಸಿಬ್ಬಂದಿಗಳು ತೊಡಗಿಸಿಕೊಂಡರು.