ವೀರಾಜಪೇಟೆ, ಫೆ. ೨೧: ಪಟ್ಟಣದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಎನ್. ಎಸ್. ಎಸ್. ಘಟಕಗಳ ಸಹಯೋಗದಲ್ಲಿ ತಾ. ೨೪ ರಂದು ರಕ್ತದಾನ ಶಿಬಿರ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ ೧೦ ಗಂಟೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕರಾದ ಎ. ಎಸ್. ಪೊನ್ನಣ್ಣ ರವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ. ಫಾ. ಮದಲೈ ಮುತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.