ಸಿದ್ದಾಪುರ, ಮಾ. ೭: ಮಾಲ್ದಾರೆ ಗ್ರಾಮದ ಶ್ರೀ ಮುತ್ತಪ್ಪ ದೇವಾಲಯದ ಭಂಡಾರ ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ಕೆಲವು ತಿಂಗಳ ಹಿಂದೆ ಮಾಲ್ದಾರೆ ಪಟ್ಟಣದಲ್ಲಿರುವ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಕಳ್ಳತನ ಮಾಡಿ ಹುಂಡಿಯನ್ನು ಸಮೀಪದ ಅರಣ್ಯಕ್ಕೆ ಎಸೆದು ಕಳ್ಳ ಪರಾರಿಯಾಗಿದ್ದ. ಈ ಬಗ್ಗೆ ದೇವಾಲಯ ಸಮಿತಿಯ ಆಡಳಿತ ಮಂಡಳಿಯವರು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ತನಿಖೆ ಕೈಗೊಂಡಾಗ ದೇವಾಲಯದ ಹುಂಡಿಯನ್ನು ಕಳ್ಳತನ ಮಾಡಿದ್ದ ಹಾಲುಗುಂದ ಗ್ರಾಮದ ನಿವಾಸಿ ವೀರೇಶ್ (೩೩) ಎಂಬಾತನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಸಿದ್ದಾಪುರ ಕ್ರೆöÊಂ ಠಾಣಾಧಿಕಾರಿ ಶಿವಣ್ಣ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.