ದ.ಸಂ.ಸ.ಯಿAದ ಪ್ರತಿಭಟನೆ
ಪೊನ್ನಂಪೇಟೆ, ಮಾ. ೮: ದಲಿತರ ಅಭಿವೃದ್ಧಿಗೆ ಮೀಸಲಿರಿಸಿದ ಅನುದಾನ ವನ್ನು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಬಳಸುತ್ತಿರುವುದನ್ನು ಖಂಡಿಸಿ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು.
ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ ಸಂಚಾಲಕ ಹೆಚ್.ಆರ್. ಪರಶುರಾಮ್ ನೇತೃತ್ವದಲ್ಲಿ ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ದಲಿತರ ಅಭಿವೃದ್ಧಿಗೆ ಮೀಸಲಿರಿಸಿದ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿರುವುದರ ವಿರುದ್ಧ ಅಸಮಾಧಾನ ದ.ಸಂ.ಸ.ಯಿAದ ಪ್ರತಿಭಟನೆ
ಪೊನ್ನಂಪೇಟೆ, ಮಾ. ೮: ದಲಿತರ ಅಭಿವೃದ್ಧಿಗೆ ಮೀಸಲಿರಿಸಿದ ಅನುದಾನ ವನ್ನು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಬಳಸುತ್ತಿರುವುದನ್ನು ಖಂಡಿಸಿ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು.
ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ ಸಂಚಾಲಕ ಹೆಚ್.ಆರ್. ಪರಶುರಾಮ್ ನೇತೃತ್ವದಲ್ಲಿ ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ದಲಿತರ ಅಭಿವೃದ್ಧಿಗೆ ಮೀಸಲಿರಿಸಿದ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿರುವುದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ತಕ್ಷಣ ಹಣವನ್ನು ಸಮುದಾಯದ ಯೋಜನೆಗೆ ಬಳಕೆ ಯಾಗುವಂತೆ ಮೀಸಲಾಗಿರಿಸಬೇಕು ಎಂದು ಒತ್ತಾಯಿಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಸಂಚಾಲಕ ಹೆಚ್.ಆರ್ ಪರಶುರಾಮ್ ಮಾತನಾಡಿ, ಗ್ಯಾರಂಟಿ ಯೋಜನೆಗಳು ದಲಿತರು ಮತ್ತು ದಲಿತರೇರರ ನಡುವಿನ ಸಾಮಾಜಿಕ, ಆರ್ಥಿಕ ಸಮಾನತೆಯ ಅಂತರವನ್ನು ಕಡಿಮೆ ಮಾಡುವುದಿಲ್ಲ. ದಲಿತರ ಅಭಿವೃದ್ಧಿಗೆ ಬಳಕೆಯಾಗಬೇಕಾದ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆಯಾಗುತ್ತಿದೆ ಇದರಿಂದ ದಲಿತರ ಅಭಿವೃದ್ಧಿ ಮತ್ತಷ್ಟು ಕ್ಷೀಣಿಸಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
೨೦೧೩ ರಲ್ಲಿ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯಲ್ಲಿನ ಅಂತರವನ್ನು ತುಂಬಲು ಯೋಜನೆ ಯನ್ನು ಜಾರಿಗೆ ತರಲಾಯಿತು.
ಆದರೂ ೨೦೧೫ರ ವರದಿ ಪ್ರಕಾರ ದಲಿತರು ಶೋಚನೀಯ ಸ್ಥಿತಿ ಯಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ ದಲಿತರಿಗೆ ಮೀಸಲಿರಿಸಿದ ಅನುದಾನ ವನ್ನು ಗ್ಯಾರಂಟಿ ಯೋಜನೆಗೆ ಬಳಸು ತ್ತಿರುವ ಸರ್ಕಾರದ ನಡೆ ದಲಿತಪರ ಕಾಳಜಿ ಮತ್ತು ಚಿಂತನೆಯನ್ನು ಕಳಚಿಕೊಂಡAತೆ ತೋರುತ್ತಿದೆ ಎಂದು ಹೇಳಿದರು. ಎಸ್.ಸಿ., ಎಸ್.ಟಿ. ಮತ್ತು ಟಿ.ಎಸ್.ಪಿ. ಯೋಜನೆಯು ದಲಿತರು ಮತ್ತು ಇತರ ಸಮುದಾಯಗಳ ನಡುವಿನ ಶೈಕ್ಷಣಿಕ ಆರ್ಥಿಕ ಸಾಮಾಜಿಕ ಅಸಮಾನತೆಯ ಅಂತರವನ್ನು ಕಡಿಮೆ ಮಾಡುವ ಉದ್ದೇಶದೊಂದಿಗೆ ಜಾರಿಗೆ ತಂದ ಯೋಜನೆಯಾಗಿದೆ.
ದಲಿತರ ಅಭಿವೃದ್ಧಿಯ ಚಿಂತನೆಯಲ್ಲಿ ಅನುಷ್ಠಾನಕ್ಕೆ ತಂದ ಯೋಜನೆಯ ಅನುದಾನವನ್ನು ಇತರ ಅಭಿವೃದ್ಧಿಗೆ ಬಳಸುವುದು ಸೂಕ್ತವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
೨೦೨೩-೨೪ನೇ ಸಾಲಿನಲ್ಲಿ ೨೫ ಕೋಟಿ ಹಣವನ್ನು ಗ್ಯಾರಂಟಿಗಳಿಗೂ, ೧೫೦೦೦ ಕೋಟಿ ಹಣವನ್ನು ಇತರ ಉದ್ದೇಶಕ್ಕೂ ಬಳಸಿದ್ದಾರೆ. ಇದು ದಲಿತ ಅಭಿವೃದ್ಧಿ ಕಾಯ್ದೆಯನ್ನು ಉಲ್ಲಂಘಿಸಿದAತೆ ಆಗಿದೆ ಎಂದು ಹೇಳಿದರು.
ಜಿಲ್ಲಾ ಸಂಘಟನಾ ಸಂಚಾಲಕ ಹೆಚ್.ಬಿ. ಮುರುಗ, ವಿಜಯ್ ನಿಟ್ಟೂರು, ಮುತ್ತ ಕುಶಾಲನಗರ ಸೇರಿದಂತೆ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಸದಸ್ಯರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಗ್ಯಾರಂಟಿ ಯೋಜನೆಗೆ ದಲಿತರ ಅಭಿವೃದ್ಧಿಗೆ ಮೀಸಲಿರಿಸಿದ ಹಣವನ್ನು ಬಳಸದಂತೆ ಒತ್ತಾಯಿಸಿ ಸ್ಥಳೀಯ ಪೊಲೀಸ್ ಉಪನಿರೀಕ್ಷಕ ಕಾವೇರಪ್ಪ ಅವರಿಗೆ ಮನವಿ ಪತ್ರವನ್ನು ಪ್ರತಿಭಟನೆಗಾರರು ಸಲ್ಲಿಸಿದರು.