ಕಣಿವೆ, ಮಾ. ೮: ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಪ್ರಸಂಗ ಕಣಿವೆ ಗ್ರಾಮದ ಮುಖ್ಯ ಹೆದ್ದಾರಿಯಲ್ಲಿ ನಡೆದಿದೆ.
ಘಟನೆಯಲ್ಲಿ ಬೈಕ್ ಸವಾರ ತೊರೆನೂರು ಗ್ರಾಮದ ಶ್ರೀನಿವಾಸ್ ಎಂಬವರ ಕಾಲುಗಳು ಪೂರ್ಣ ಜಖಂಗೊAಡಿವೆ. ಮತ್ತೊಂದು ಬೈಕ್ನಲ್ಲಿದ್ದ ಚರಣ್, ಈತನ ಪತ್ನಿ ಪ್ರೇಮ ಹಾಗೂ ಏಳು ವರ್ಷದ ಬಾಲಕ ಗೌರವ್ ಎಂಬವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಕೂಡಲೇ ಗಾಯಾಳುಗಳನ್ನು ಕೂಡುಮಂಗಳೂರು ಗ್ರಾಪಂ ಸದಸ್ಯೆ ಇಂದಿರಾ, ಪಿಡಿಒ ರವೀಶ್ ಸಾಹಿತಿ ಭಾರಧ್ವಜ್ ಅವರುಗಳು ಗಾಯಾಳುಗಳನ್ನು ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲು ನೆರವಾದರು.
ಪ್ರಥಮ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಲಾಗಿದೆ.
ಈ ಸಂಬAಧ ಕುಶಾಲನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.